ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರರಿಗೆ ಈಗಾಗಲೇ ಪಂಚಮಸಾಲಿ, ಕುರುಬ ಸಮುದಾಯದ ಮೀಸಲಾತಿ ಹೆಚ್ಚಿಸಲು ಆಗ್ರಹಿಸಿ ಮನವಿ ಸಲ್ಲಿಸಿವೆ. ಇದೀಗ ಸಿಎಂಗೆ ಮತ್ತೊಂದು ಮೀಸಲಾತಿ ಹೆಚ್ಚಳದ ಸಂಕಷ್ಟ ಎದುರಾಗಿದೆ. ಇಂದು ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಸಿಎಂ ಈಗಾಗಲೇ ಆಗಮಿಸಿದ್ದು, ವಾಲ್ಮೀಕಿ ಜಾತ್ರೆಯಲ್ಲಿ ಸಿಎಂ ಈ ಬಗ್ಗೆ ಘೋಷಣೆ ನಿರೀಕ್ಷೆ ಹುಟ್ಟಿಸಿದೆ.
ಈ ಬಗ್ಗೆ ಜಾತ್ರಾ ಮಹೋತ್ಸವದಲ್ಲಿ ಸಿಎಂ ವಾಲ್ಮೀಕಿ ಸಮುದಾಯದ ಮೀಸಲಾತಿಯನ್ನು 7.5ಕ್ಕೆ ಹೆಚ್ಚಳ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ರಾಜನಹಳ್ಳಿಗೆ ಬಂದಿಳಿದಿರುವ ಸಿಎಂ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ವೇದಿಕೆ ಮೇಲೆ ಈ ಬಗ್ಗೆ ಮಾತನಾಡುತ್ತೇನೆ ಎಂದಷ್ಟೇ ಹೇಳಿದರು.



