Connect with us

Dvgsuddi Kannada | online news portal | Kannada news online

ದಾವಣಗೆರೆ: ಸೆ. 2ರಿಂದ ಜಿಲ್ಲೆಯೊಳಗಿನ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ

ದಾವಣಗೆರೆ

ದಾವಣಗೆರೆ: ಸೆ. 2ರಿಂದ ಜಿಲ್ಲೆಯೊಳಗಿನ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ

ದಾವಣಗೆರೆ: ರಾಜ್ಯ ಸರ್ಕಾರವು 2024-25 ನೇ ಸಾಲಿನ ಅಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಎನಿವೇರ್ (anywhere) ನೋಂದಣಿ ವ್ಯವಸ್ಥೆಯನ್ನು ದಾವಣಗೆರೆ ಜಿಲ್ಲೆಯ ಉಪನೋಂದಣಾ ಕಚೇರಿಗಳಿಗೂ ವಿಸ್ತರಿಸಿದ್ದು, ಸೆಪ್ಟೆಂಬರ್ 2ರಿಂದ ಅನುಷ್ಠಾನವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ತಿಳಿಸಿದ್ದಾರೆ.

ಪ್ರಸ್ತುತ ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯೊಳಗಿನ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು ಎಂದು ಅವರು ತಿಳಿಸಿದ್ದಾರೆ.

ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ಇದರಿಂದ ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ. ಹಾಗಾಗಿ ಸಾರ್ವಜನಿಕರು ಎನಿವೇರ್ ನೋಂದಣಿ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top