ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಳೆ (ಫೆ.14 ) ದಾವಣಗೆರೆ ಆಗಮಿಸಲಿದ್ದಾರೆ. ಫೆ.14ರ ಮಧ್ಯಾಹ್ನ 1ಗಂಟೆಗೆ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 2.25 ಕ್ಕೆ ನ್ಯಾಮತಿ ತಾಲೂಕಿನ ಸೂರಗೊಂಡನ ಕೊಪ್ಪ ಹೆಲಿಪ್ಯಾಡ್ ತಲುಪಲಿದ್ದಾರೆ.
ಮಧ್ಯಾಹ್ನ 3ಕ್ಕೆ ‘ಸಂತ ಸೇವಾಲಾಲರ 282 ನೇ ಜಯಂತುತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 4.30ಕ್ಕೆ ಸೂರಗೊಂಡನ ಕೊಪ್ಪದಿಂದ ಹೆಲಿಕಾಪ್ಟರ್ ಮೂಲಕ ಹೊರಟು 4.50ಕ್ಕೆ ಶಿಕಾರಿಪುರ ತಲುಪಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಬಿ.ಪಿ.ಚನ್ನಬಸವೇಶ ತಿಳಿಸಿದ್ದಾರೆ .



