Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಕೊರೊನಾ ವಾರಿಯರ್ಸ್ ಗೆ ಸನ್ಮಾನ

ಪ್ರಮುಖ ಸುದ್ದಿ

ದಾವಣಗೆರೆ: ನಾಳೆ ಕೊರೊನಾ ವಾರಿಯರ್ಸ್ ಗೆ ಸನ್ಮಾನ

ದಾವಣಗೆರೆ: ನಾಳೆ ( ಜ.05) ಜಿಲ್ಲಾ ಪಂಚಾಯಿತಿ, ಪ್ರೇರಣಾ ಸಾಂಸ್ಕೃತಿಕ ಸಂಸ್ಥೆ, ಜಿಲ್ಲಾ ಯೋಗ ಒಕ್ಕೂಟ ಹಾಗೂ ಹಿಮಾಲಯನ್ ಅಡ್ವೆಂಚರ್ ಅಂಡ್ ನೇಚರ್ ಅಕಾಡೆಮಿ ಇವುಗಳ ಸಂಯುಕ್ತಾಶ್ರಯದಲ್ಲಿ ಕೋವಿಡ್-19 ವಿರುದ್ಧ ಹೋರಾಡಿದ ವೈದ್ಯಕೀಯ ಸಿಬ್ಬಂದಿ, ಪೊಲೀಸರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಎಲ್ಲ  ಕೊರೊನಾ ವಾರಿಯರ್ಸ್ ಗಳಿಗೆ ನಗರದ ತುಂಗಭದ್ರ ಸಭಾಂಗಣದಲ್ಲಿ ಸನ್ಮಾನ ಸಮಾರಂಭ ನಡೆಯಲಿದೆ.

ಈ  ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗ ಒಕ್ಕೂಟದ ವಾಸುದೇವ ರಾಯ್ಕರ್, ಕಾರ್ಯಕ್ರಮವನ್ನು  ಸಂಸದ ಜಿ.ಎಂ.ಸಿದ್ದೇಶ್ವರ ಕಾರ್ಯಕ್ರಮ ಉದ್ಘಾಟಿಸುವರು. ಪ್ರೇರಣ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷೆ ಚೇತನ ಶಿವಕುಮಾರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಪಂ ಸಿಇಒ ಪದ್ಮ ಬಸವಂತಪ್ಪ ಭಾಗವಹಿಸುವರು ಎಂದು ತಿಳಿಸಿದರು.

ಇದೇ ವೇಳೆ ವಿಶೇಷ ಆಹ್ವಾನಿತರಾಗಿ ಶಾಸಕರಾದ ಎಸ್.ಎ.ರವೀಂದ್ರನಾಥ್, ಎಸ್.ವಿ.ರಾಮಚಂದ್ರ, ಮೇಯರ್ ಬಿ.ಜಿ.ಅಜಯಕುಮಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನರ್ದೇಶಕ ಕೆ.ಎಚ್.ವಿಜಯಕುಮಾರ್ ಮತ್ತಿತರರು ಭಾಗವಹಿಸುವರು. ಈ ವೇಳೆ 180  ಜನ ಕೊರೊನಾ ವಾರಿಯರ್ಸಗಳಿಗೆ ಗೌರವ ಪುರಸ್ಕಾರ ನೀಡಲಾಗುವುದು ಎಂದರು.  ಈ ಸಂದರಭದಲ್ಲಿ  ಚೇತನ ಶಿವಕುಮಾರ, ಕೋಟ್ರೇಶ ಎನ್.ಕೆ, ಆನಂದ, ಡಾ.ಸಿದ್ದೇಶ್, ಪ್ರಕಾಶ್ ಉತ್ತಂಗಿ, ನಿರಂಜನ ಭಾಗಹಿಸಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});