Connect with us

Dvgsuddi Kannada | online news portal | Kannada news online

ದಾವಣಗೆರೆ: ಜ.25 ರಿಂದ ಮೂರು ದಿನ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ

ದಾವಣಗೆರೆ: ಜ.25 ರಿಂದ ಮೂರು ದಿನ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ: ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ಜ.25, 26 ಮತ್ತು 27 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಜ.25 ರಂದು ಸಂಜೆ 6 ಗಂಟೆಗೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸಿ, ಅಲ್ಲಿಯೇ ವಾಸ್ತವ್ಯ ಮಾಡುವರು. ಜ.26 ರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ರವರೆಗೆ ಪ್ರವಾಸಿ ಮಂದಿರದಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಭೇಟಿ ಮಾಡುವರು. ಮಧ್ಯಾಹ್ನ 12.30 ಕ್ಕೆ ದಾವಣಗೆರೆಯಿಂದ ನಿರ್ಗಮಿಸಿ ಮಧ್ಯಾಹ್ನ 1 ಗಂಟೆಗೆ ಮಲೆಬೆನ್ನೂರಿನ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವರು. ಮಧ್ಯಾಹ್ನ 3.30 ಕ್ಕೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸುವರು ಹಾಗೂ ಅಲ್ಲಿಯೇ ವಾಸ್ತವ್ಯ ಮಾಡುವರು.
ಜ.27 ರ ಬೆಳಿಗ್ಗೆ 9 ಗಂಟೆಗೆ ದಾವಣಗೆರೆಯಿಂದ ಹೊರಟು 10 ಗಂಟೆಗೆ ಜಗಳೂರು ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ಜಗಳೂರಿನ ಗುರುಭವನದಲ್ಲಿ ಏರ್ಪಡಿಸಿರುವ ಜನಸ್ಪಂದನ ಹಾಗೂ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಜಗಳೂರಿನಿಂದ ಬೆಂಗಳೂರಿಗೆ ನಿರ್ಗಮಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top
(adsbygoogle = window.adsbygoogle || []).push({});