ದಾವಣಗೆರೆ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಇವರು ನ.19 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 5 ಗಂಟೆಗೆ ದಾವಣಗೆರೆಗೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ‘ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರಲು ಬೆಂಗಳೂರು-1, ಕರ್ನಾಟಕ-1 ಮಾದರಿಯಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಪ್ರತಿ ಗ್ರಾಮದಲ್ಲಿ ಗ್ರಾಮ-1 ಕೇಂದ್ರಗಳ ಯೋಜನೆಗೆ ಚಾಲನೆ ನೀಡಲಿದ್ದಾರೆ. ಅನುಷ್ಟಾನವನ್ನು ಪ್ರಾಯೋಗಿಕವಾಗಿ ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಲೋಕಾರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ ದಾವಣಗೆರೆಯಿಂದ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.



