ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಮೆಟ್ರಿಕ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ(ಊಟ ಮತ್ತು ವಸತಿ ಸಹಾಯ ಯೋಜನೆ)ಯ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್ ಲೈನ್ ಮೂಲಕ htts://SAP.postmatric.karnataka.gov.in ವೆಬ್ ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಜನವರಿ 10, 2024 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ; 0836-2447961 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



