Connect with us

Dvgsuddi Kannada | online news portal | Kannada news online

ಮಹಿಳಾ ಅಭಿವೃದ್ಧಿ ನಿಗಮದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ಮಹಿಳಾ ಅಭಿವೃದ್ಧಿ ನಿಗಮದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ.

ಉದ್ಯೋಗಿನಿ ಯೋಜನೆ:ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್‌ಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತದೆ. ವಯೋಮಿತಿ 18 ರಿಂದ 55 ವರ್ಷ ಒಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಘಟಕ ವೆಚ್ಚವು ಕನಿಷ್ಟ ರೂ.1 ಲಕ್ಷದಿಂದ ಗರಿಷ್ಟ ರೂ.3 ಲಕ್ಷ (ಸಹಾಯಧನ ಶೇ.50) ಮತ್ತು ಸಾಮಾನ್ಯ ವರ್ಗದವರಿಗೆ ಘಟಕ ವೆಚ್ಚ ಗರಿಷ್ಟ ರೂ.3 ಲಕ್ಷ (ಸಹಾಯಧನ ಶೇ.30 ರಷ್ಟು) ನೀಡಲಾಗುವುದು.

ಚೇತನ ಯೋಜನೆ:ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ. ಧನಶ್ರೀ ಯೋಜನೆ:ಹೆಚ್‌ಐವಿ ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:ಲಿಂಗತ್ವ ಅಲ್ಪಸಂಖ್ಯಾತ ಫಲಾನುಭವಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ:1993-94 ಮತ್ತು 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.

ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. ಉದ್ಯೋಗಿನಿ ಯೋಜನೆಯ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು, ಅರ್ಜಿದಾರರು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ಆನ್‌ಲೈನ್ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗೆ ಭೇಟಿ ನೀಡಬಹುದು. ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು ಸಚಿವರು, ಶಾಸಕರು, ನಿಗಮದ ಅಧ್ಯಕ್ಷರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು.ಈ  ಹಿಂದೆ ಮೇಲ್ಕಂಡ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರ ಕಚೇರಿಗೆ ಸಂಪರ್ಕಿಸಬಹುದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top