ದಾವಣಗೆರೆ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಸೂಚಿಸಿರುವಂತೆ ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳೊಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಯನ್ನು ಪಾವತಿಸುವವರಿಗೆ ಶೇ.5 ರಷ್ಟು ವಿನಾಯಿತಿ ನೀಡಲಾಗುವುದು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ವಿಧದ ಆಸ್ತಿಗಳ ತೆರಿಗೆ ಪಾವತಿಸುವ ಸಾರ್ವಜನಿಕರು ಜೂನ್.30 ರೊಳಗಾಗಿ ತೆರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ತೆರಿಗೆ ಪಾವತಿಸಬೇಕೆಂದು ಜಿ.ಪಂ ಮುಖದಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.



