ದಾವಣಗೆರೆ: ಸಾರ್ವಜನಿಕರು ವಿವಿಧ ಇಲಾಖೆಗಳ ಕೆಲಸಕ್ಕಾಗಿ ಅಲೆದಾಡುವುದನ್ನು ತಪ್ಪಿಸಲು ಗ್ರಾಮ ಪಂಚಾಯತಿಗಳೇ ‘ಫ್ರಂಟ್ ಆಫೀಸ್’ ರೀತಿ ಕೆಲಸ ಮಾಡಬೇಕು. ಜನರು ಅರ್ಜಿ ಸಲ್ಲಿಸಿದಾಗ ಪಂಚಾಯತ್ ಸಿಬ್ಬಂದಿಯೇ ಸಂಬಂಧಪಟ್ಟ ಇಲಾಖೆಗಳಿಂದ ಕೆಲಸ ಮಾಡಿಸಿಕೊಡುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ್ ಅಭಿಪ್ರಾಯಪಟ್ಟರು.
ದಾವಣಗೆರೆ: ಜ.23ರ ಅಡಿಕೆಯ ಕನಿಷ್ಠ, ಗರಿಷ್ಠ ದರ ಎಷ್ಟಿದೆ…?
ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
“ಗ್ರಾಮ ಪಂಚಾಯಿತಿಗಳು ಕೇವಲ ಸರ್ಕಾರಿ ಕಚೇರಿಗಳಾಗದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ಗ್ರಾಮದ ಅಭಿವೃದ್ಧಿಗೆ ಪೂರಕವಾದ ಕೇಂದ್ರಗಳಾಗಬೇಕು. ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸಲು ಪ್ರತಿಯೊಬ್ಬ ನಾಗರಿಕನು ಆಡಳಿತದಲ್ಲಿ ನೇರವಾಗಿ ಪಾಲ್ಗೊಳ್ಳುವುದು ಅನಿವಾರ್ಯವಾಗಿದೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದು ತೇರಿನ ಎರಡು ಚಕ್ರಗಳಿದ್ದಂತೆ. ಇವರಿಬ್ಬರ ನಡುವೆ ಸಮನ್ವಯವಿದ್ದರೆ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಒತ್ತಿ ಹೇಳಿದರು.
ದಾವಣಗೆರೆ: ಶ್ರೀ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ ಮಾನ್ಯತೆ ರದ್ದು; ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ
ಗ್ರಾಮಸಭೆಗಳ ಸಬಲೀಕರಣ: ಸಂವಿಧಾನದ 73 ಮತ್ತು 74ನೇ ತಿದ್ದುಪಡಿಯ ಆಶಯದಂತೆ ಗ್ರಾಮಸಭೆಗಳಿಗೆ ಹೆಚ್ಚಿನ ಅಧಿಕಾರವಿದೆ. ಪ್ರತಿಯೊಂದು ಕುಟುಂಬಕ್ಕೂ ಗ್ರಾಮಸಭೆಯ ಜವಾಬ್ದಾರಿ ಮತ್ತು ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಪ್ರತಿ ಮನೆಗೂ ಮಾಹಿತಿ ಪತ್ರ ತಲುಪಿಸುವ ಅಭಿಯಾನ ಹಮ್ಮಿಕೊಳ್ಳಬೇಕು.
ಯೋಜನೆ ರೂಪಿಸುವಲ್ಲಿ ಜನರ ಪಾತ್ರ: 2027-28ನೇ ಸಾಲಿನ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಜನರ ಅಪೇಕ್ಷೆಗಳಿಗೆ ಆದ್ಯತೆ ನೀಡಬೇಕು. ‘ಪ್ರಿಯಾರಿಟಿ ರಾಂಕಿಂಗ್’ ಮೂಲಕ ಅಗತ್ಯವಿರುವ ಕಾಮಗಾರಿಗಳನ್ನು ಪಟ್ಟಿ ಮಾಡಿ ಅನುಷ್ಠಾನಕ್ಕೆ ತರಬೇಕು.ಗಾಂಧಿ ಗ್ರಾಮ ಸ್ವರಾಜ್ಯ ಬಳಗ: ಪ್ರತಿ ವಾರ್ಡ್‍ಗಳಲ್ಲಿ ಕನಿಷ್ಠ 100 ಜನ ಸದಸ್ಯರನ್ನು ಒಳಗೊಂಡ ‘ಗಾಂಧಿ ಗ್ರಾಮ ಸ್ವರಾಜ್ಯ ಬಳಗ’ಗಳನ್ನು ರಚಿಸಬೇಕು. ಈ ಬಳಗದಲ್ಲಿ ಗ್ರಾಮದ ಎಲ್ಲಾ ಸಮಾಜಗಳ ಪ್ರತಿನಿಧಿಗಳು ಇರಬೇಕು, ಇದು ಗ್ರಾಮಸಭೆಗಳಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸುತ್ತದೆ.
ಸ್ವಚ್ಛತೆಗೆ ಆದ್ಯತೆ: ತಿಂಗಳಿಗೆ ಕನಿಷ್ಠ ಒಂದು ದಿನ ಗ್ರಾಮಸ್ಥರೆಲ್ಲರೂ ಸೇರಿ ಶ್ರಮದಾನದ ಮೂಲಕ ತಮ್ಮ ಗ್ರಾಮವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಸಂಕಲ್ಪ ಮಾಡಬೇಕು. ಗ್ರಾಮಗಳು ನಗರದ ಕೊಳಗೇರಿಗಳಂತೆ ಆಗಬಾರದು, ಬದಲಿಗೆ ಸುಂದರ ಮತ್ತು ಆರೋಗ್ಯಕರವಾಗಿರಬೇಕು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಸಿಇಓ ಗಿತ್ತೆ ಮಾಧವ ವಿಠ್ಠಲರಾವ್ ಹಾಗೂ ವಿವಿಧ ತಾಲೂಕುಗಳ ಪಂಚಾಯತ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.



