ದಾವಣಗೆರೆ: ಕುರುಬಸಮುದಾಯವನ್ನು ಎಸ್ ಟಿ ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ನಾಳೆ (ಜ.06) ಕುರುಬ ಸಮಾಜದ ಬೃಹತ್ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ರಾಜ್ಯದ ವಿವಿಧ ಪ್ರದೇಶದಲ್ಲಿ ಜನ ಜಾಗೃತಿ ಸಮಾವೇಶಗಳು ಈಗಾಗಲೇ ನಡೆಯುತ್ತಿದೆ. ನಾಳೆ ನಗರದ ಪಿಬಿ ರಸ್ತೆಯ ಬೀರಲಿಂಗೇಶ್ವರ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದ್ದು, 25 ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ.
ಕಾಗಿನೆಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಮಠದ ಈಶ್ವರಾನಂದ ಪುರಿ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಸಿದ್ಧರಾಮಾನಂದ ಸ್ವಾಮೀಜಿ, ಸಚಿವರಾದ ಕೆ.ಎಸ್.ಈಶ್ವರಪ್ಪ, ಬಿ.ಎ.ಬಸವರಾಜ ಭೈರತಿ, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಬಂಡೆಪ್ಪ ಕಾಶೆಂಪುರ್, ಶಾಸಕರಾದ ಎಂ.ಟಿ.ಬಿ.ನಾಗರಾಜ, ಎಸ್.ರಾಮಪ್ಪ ಸೇರಿದಂತೆ ಅನೇಕರು ಪಾಲ್ಗೊಳ್ಳುವ ಪಾಲ್ಗೊಳ್ಳಲಿದ್ದಾರೆ.



