Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾ.8 ರಂದು ಲೋಕ ಅದಾಲತ್; ರಾಜೀಯಾಗಬಲ್ಲ ಎಲ್ಲ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶ

ದಾವಣಗೆರೆ

ದಾವಣಗೆರೆ: ಮಾ.8 ರಂದು ಲೋಕ ಅದಾಲತ್; ರಾಜೀಯಾಗಬಲ್ಲ ಎಲ್ಲ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶ

ದಾವಣಗೆರೆ: ಜಿಲ್ಲಾ ನ್ಯಾಯಾಲಯ ಸೇರಿದಂತೆ ಎಲ್ಲಾ ತಾಲ್ಲೂಕಿನ ನ್ಯಾಯಾಲಯಗಳಲ್ಲಿ ಮಾರ್ಚ್ 8 ರಂದು ರಾಷ್ಟ್ರೀಯ ಲೋಕ ಅದಾಲತ್ (Loka Adalat) ನಡೆಯಲಿದ್ದು, ರಾಜೀಯಾಗಬಲ್ಲ ಎಲ್ಲ ಪ್ರಕರಣಗಳನ್ನು ಸಂಧಾನದ (Negotiation) ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ (District Judge) ರಾಜೇಶ್ವರಿ.ಎನ್ ಹೆಗಡೆ ತಿಳಿಸಿದರು.

ದಾವಣಗೆರೆ: ಕರ್ತವ್ಯ ಲೋಪ ಆರೋಪ‌; ಮೂವರು ಪೊಲೀಸರ ಅಮಾನತು ಮಾಡಿ ಎಸ್ಪಿ ಆದೇಶ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (nationallegal services authority)ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತಾನಾಡಿದರು. ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಇದರ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ಲೋಕ್ ಅದಾಲತ್ ನಡೆಯಲಿದೆ.

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮೇ.10ರವರೆಗೆ ಇ-ಖಾತಾ ಅಭಿಯಾನ

ಈ ಲೋಕ್ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್. ಕಾಯ್ದೆಯಡಿಯ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹದು. ಕೌಟುಂಬಿಕ ನ್ಯಾಯಾಲಯದ (Family court) ಪ್ರಕರಣಗಳು (ವಿಚ್ಛೇಧನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು. ಹಾಗೂ ಸಿವಿಲ್ ವ್ಯಾಜ್ಯಗಳಲ್ಲಿ ಪಕ್ಷಗಾರರು ಲೋಕ್ ಅದಾಲತ್‍ನಲ್ಲಿ ರಾಜಿಯಾದರೆ ಪಕ್ಷಗಾರರು ಸರ್ಕಾರಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ವಾಪಸ್ ಕೊಡಲು ಅವಕಾಶವಿದೆ ಎಂದರು.

1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ.ಹೆಚ್.ಅಣ್ಣಯ್ಯನವರ್ ಮಾತನಾಡಿ ಲೋಕ ಅದಾಲತ್‍ನ ಮೂಲಕ ಸಾರ್ವಜನಿಕರಿಗೆ ಶೀಘ್ರ ಮತ್ತು ಕಡಿಮೆ ಖರ್ಚಿನಲ್ಲಿ ನ್ಯಾಯ ಒದಗಿಸುವಲ್ಲಿ ವಕೀಲರ ಪಾತ್ರ ಬಹು ಮುಖ್ಯವಾಗಿದೆ ಎಂದರು. ವಕೀಲರು ನ್ಯಾಯಾಲಯಕ್ಕೆ ಬರುವ ಕಕ್ಷಿದಾರರಿಗೆ ಅತ್ಯುತ್ತಮ ಮಾರ್ಗಗಳನ್ನು ನೀಡಬೇಕೆಂದು ಕರೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣನವರ ಮಾತನಾಡಿ ಲೋಕ್ ಅದಾಲತ್‍ನಲ್ಲಿ ಉಭಯ ಪಕ್ಷಗಾರರು ಪರಸ್ಪರ ಒಪ್ಪಿದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆಶಯದಂತೆ ಲೋಕ್ ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯಾರ್ಥಪಡಿಸಲು ಲೋಕ್-ಅದಾಲತ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಸಾರ್ವಜನಿಕರು ವಿಶೇಷವಾಗಿ ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ ಅದಾಲತ್‍ನ ಸದುಪಯೋಗ ಪಡಿಸಿಕೊಳ್ಳಬೇಕೆಂದು
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್ ಅರುಣಕುಮಾರ್, ದಾವಣಗೆರೆ ಘಟಕದ ನ್ಯಾಯಾಧೀಶರು, ವಕೀಲ ಸಂಘದ ಎಲ್ಲಾ ಪದಾಧಿಕಾರಿಗಳು, ಹಿರಿಯ ಮತ್ತು ಕಿರಿಯ ಹಾಗೂ ಮಹಿಳಾ ನ್ಯಾಯವಾದಿಗಳು ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top