ದಾವಣಗೆರೆ: ದಾವಣಗೆರೆ ಪಾಲಿಕೆ ಮೇಯರ್ ಸ್ಥಾನಕ್ಕೆ ಈಗಾಗಲೇ ಚುನಾವಣೆ ಪ್ರಕ್ರಿಯೆ ಶುರುವಾಗಿದ್ದು, ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ.
ಈ ಮೂಲಕ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಿ ಹಿಡಿಯುವುದು ಬಹುತೇಕ ನಿಶ್ಚಯವಾಗಿದೆ. ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ಆಯ್ಕೆ ಬಹುತೇಕ ಖಚಿತವಾಗಿದೆ. ದಾವಣಗೆರೆ ಮಹಾನಗರಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ಸಚಿವ ಆರ್ ಶಂಕರ್ , ಸಂಸದ ಜಿ ಎಂ ಸಿದ್ದೇಶ್ವರ್ , ಚಿದಾನಂದಗೌಡ ಸೇರಿದಂತೆ ಬಿಜೆಪಿಯ 30 ಸದಸ್ಯರು ಭಾಗಿದ್ದಾರೆ. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರ ಚುನಾವಣೆಗೆ ಗೈರು , ಕಾಂಗ್ರೆಸ್ ನ ಮೂರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದಾರೆ.

ಇದರೊಂದಿಗೆ ಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲುವುದು ಪಕ್ಕಾ ಆಗಿದೆ. ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನಡೆಯಲಿದೆ. ನಿನ್ನೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಾಲಿಕೆ ಸದಸ್ಯ, ಶಾಮನೂರು ಶಿವಶಂಕರಪ್ಪ ಅಪ್ತ ದೇವರಮನೆ ಶಿವಕುಮಾರ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ವಿಶ್ವಾಸ ಕುಸಿದಂತಾಗಿದೆ.
45 ಪಾಲಿಕೆ ಸ್ಥಾನದಲ್ಲಿ ಬಿಜೆಪಿ ಪಕ್ಷೇತರ ಸೇರಿ 21 ಹಾಗೂ ಕಾಂಗ್ರೆಸ್ ಪಕ್ಷೇತರ ಸೇರಿ 21 (ಇಬ್ಬರು ರಾಜೀನಾಮೆ) ಜೆಡಿಎಸ್ 01 ಸ್ಥಾನ ಹೊಂದಿದೆ.



