ದಾವಣಗೆರೆ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆಯನ್ನು ಪರಿಗಣಿಸಿ ನೀಡಲಾಗುವ 2019 ರ ರಾಷ್ಟ್ರಪತಿ ಪದಕಕ್ಕೆ ದಾವಣಗೆರೆ ಜಿಲ್ಲೆಯ ಪೊಲೀಸ್ ಅಧಿಕಾರಿ ಡಿವೈಎಸ್ಪಿ ಬಸವರಾಜ್ ಬಿ.ಎಸ್. ಹಾಗೂ ಹೆಡ್ ಕಾನ್ಸ್ಟೇಬಲ್ ರಾಮಚಂದ್ರ ಬಿ. ಜಾಧವ್ ಅವರು ಭಾಜನರಾಗಿದ್ದಾರೆ. ದಿನಾಂಕ-07-01-2021 ರಂದು ಬೆಂಗಳೂರಿನ ರಾಜಭನದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಪದಕ ಸ್ವೀಕರಿಸಿದರು.

ರಾಷ್ಟಪತಿ ಪದಕ ವಿಜೇತರಿಗೆ ಇಂದು ಪೊಲೀಸ್ ಅಧೀಕ್ಷಕ ಹನುಮಂತರಾಯ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೀವ್ ಎಂ. ಅಭಿನಂದಿಸಿದರು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.



