ದಾವಣಗೆರೆ: ಅನರ್ಹರು ಬಿಪಿಎಲ್ ಪಡಿತರ ಕಾರ್ಡ್ ರದ್ದುಪಡಿಸಲು ಅವಕಾಶ ಕಲ್ಪಿಸಲಾಗಿದ್ದು, ರದ್ದು ಪಡಿಸದೇ ಹೋದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ. BPL ಕಾರ್ಡ್ ನಿಯಮದಲ್ಲಿ ಯಾವುದೇ ಹೊಸ ಬದಲಾವಣೆ ಇಲ್ಲ; ಈ ಹಿಂದೆ ಇದ್ದ ನಿಯಮಗಳೇ ಜಾರಿ : ಉಮೇಶ್ ಕತ್ತಿ
ಅನರ್ಹರು ತಾವು ಹೊಂದಿರುವ ಆದ್ಯತಾ(ಬಿಪಿಎಲ್) ವರ್ಗದ ಪಡಿತರ ಚೀಟಿಗಳನ್ನು ತಾಲ್ಲೂಕು ಕಚೇರಿಯಲ್ಲಿರುವ ಆಹಾರ ಶಿರಸ್ತೇದಾರ್ ಅಥವಾ ಆಹಾರ ನಿರೀಕ್ಷಕರುಗಳನ್ನು ಸಂಪರ್ಕಿಸಿ ತಾವು ಹೊಂದಿರುವ ಆದ್ಯತಾ (ಬಿಪಿಲ್) ವರ್ಗದ ಪಡಿತರ ಚೀಟಿಗಳನ್ನು ಆದ್ಯತಾ (ಬಿಪಿಎಲ್) ರದ್ದುಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ತಾವೇ ಸ್ವತಃ ಪಡಿತರ ಚೀಟಿಗಳನ್ನು ಹಿಂತಿರುಗಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ. ನಂತರ ಇಲಾಖೆಯೇ ಕಾರ್ಯಚರಣೆ ನಡೆಸಿ ಅನರ್ಹರು ಹೊಂದಿರುವ ಆದ್ಯತಾ (ಬಿಪಿಎಲ್) ವರ್ಗದ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿದಲ್ಲಿ, ಪತ್ತೆ ಹಚ್ಚಿದ ದಿನಾಂಕದವರೆಗೆ ತಾವು ಪಡೆದ ಪಡಿತರ ಪದಾರ್ಥಗಳವಾರು ಪ್ರತಿ ಕೆ.ಜಿ.ಗೆ ಮುಕ್ತ ಮಾರುಕಟ್ಟೆಯ ಬೆಲೆಯ ಅನುಸಾರ ಹಣವನ್ನು ವಸೂಲಿ ಮಾಡಲಾಗುವುದು. ಜೊತೆಗೆ ದಿ ಕರ್ನಾಟಕ ಪ್ರಿವೆನ್ಷನ್ ಆಫ್ ಅನಅಥರೈಜ್ಡ್ ಪೊಸೆಷನ್ ಆಫ್ ರೇಷನ್ ಕಾರ್ಡ್ ಆರ್ಡರ್ 1977ರ ರೀತ್ಯಾದ ಪ್ರಕಾರ ಕ್ರಮ ವಹಿಸಲಾಗುವುದು ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಆದ್ದರಿಂದ ಅನರ್ಹರು ತಾವು ಹೊಂದಿರುವ ಆದ್ಯತಾ (ಬಿಪಿಎಲ್) ವರ್ಗದ ಪಡಿತರ ಚೀಟಿಗಳನ್ನು ಸರ್ಕಾರಕ್ಕೆ ವಾಪಸ್ಸು ನೀಡಿ ಕಾನೂನು ಕ್ರಮದಿಂದ ವಿಮುಕ್ತಿ ಹೊಂದಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



