Connect with us

Dvgsuddi Kannada | online news portal | Kannada news online

ಇನ್ಮುಂದೆ ಆಸ್ತಿಗಳ ನೋಂದಣಿಗೆ ಹೊಸ ನಿಯಮ; ಸೆ.2ರಿಂದ ಈ ನಿಯಮ ಜಾರಿ; ಏನಿದು..? ಇಲ್ಲಿದೆ ಮಾಹಿತಿ…!!!

ದಾವಣಗೆರೆ

ಇನ್ಮುಂದೆ ಆಸ್ತಿಗಳ ನೋಂದಣಿಗೆ ಹೊಸ ನಿಯಮ; ಸೆ.2ರಿಂದ ಈ ನಿಯಮ ಜಾರಿ; ಏನಿದು..? ಇಲ್ಲಿದೆ ಮಾಹಿತಿ…!!!

ದಾವಣಗೆರೆ: ಆಸ್ತಿಗಳ ನೋಂದಣಿಯನ್ನು ಯಾವ ಸ್ಥಳದಲ್ಲಾದರೂ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸಿದ್ದು, ಸೆಪ್ಟೆಂಬರ್ 2ರಿಂದ ಜಾರಿಗೆ ಬರಲಿದೆ. ಈ ಮೂಲಕ ಜಿಲ್ಲೆಯೊಳಗೆ ಯಾವುದೇ ತಾಲ್ಲೂಕಿನಲ್ಲಿ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.

ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವರು ರೀತಿಯಲ್ಲಿ ಉಪಯುಕ್ತವಾಗಿದ್ದು ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ, ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು, ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ, ಉಪನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೆÉೀರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.

ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚರಿ ಆಯ್ಕೆ ಮಾಡಿಕೊಂಡು ನೋಂದಣಿ ಮಾಡಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top