Connect with us

Dvgsuddi Kannada | online news portal | Kannada news online

ಸಂಚಾರಿ ನಿಯಮ ಉಲ್ಲಂಘನೆಯ ದಂಡ ಬಾಕಿ ಉಳಿಸಿಕೊಂಡಿದ್ದೀರಾ..?; ಫೆ.11ರೊಳಗೆ ದಂಡ ಪಾವತಿಸಿ ಶೇ.50ರಷ್ಟು ರಿಯಾಯಿತಿ ಪಡೆಯಿರಿ…!

images 8 1

ದಾವಣಗೆರೆ

ಸಂಚಾರಿ ನಿಯಮ ಉಲ್ಲಂಘನೆಯ ದಂಡ ಬಾಕಿ ಉಳಿಸಿಕೊಂಡಿದ್ದೀರಾ..?; ಫೆ.11ರೊಳಗೆ ದಂಡ ಪಾವತಿಸಿ ಶೇ.50ರಷ್ಟು ರಿಯಾಯಿತಿ ಪಡೆಯಿರಿ…!

ದಾವಣಗೆರೆ:  ಸಿಗ್ನಲ್ ಜಂಪ್, ಒನ್ ವೇ ಸಂಚಾರ, ಹೆಲ್ಮೆಟ್ ಇಲ್ಲದೆ ರೈಡ್ …ಹೀಗೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿ, ದಂಡ ಕಟ್ಟದೆ ಬಾಕಿ ಉಳಿಸಿಕೊಂಡಿದ್ದೀರಾ..? ಕೂಡಲೇ ಫೆ.11ರೊಳಗೆ ದಂಡ ಕಟ್ಟಿ ಶೇ.50ರಷ್ಟು ರಿಯಾಯಿತಿ ಪಡೆಯಿರಿ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆದೇಶವನ್ನು ಹೊರಡಿಸಿದ್ದಾರೆ. ಈ ಹಿಂದೆ ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶರಾದ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಈ ಬಗ್ಗೆ ಮನವಿ ಮಾಡಿಕೊಂಡಿದ್ದರು.ಈ ಹಿನ್ನಲೆಯಲ್ಲಿ ನ್ಯಾಯಮೂರ್ತಿಗಳ ಮನವಿ ಮೇರೆಗೆ ಈ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಈ ಆದೇಶವು ಫೆ. 11ರೊಳಗೆ ಟ್ರಾಫಿಕ್‌ ಫೈನ್‌ ಕಟ್ಟುವವರಿಗೆ ಮಾತ್ರ ಅನ್ವಯವಾಗಲಿದೆ. ಇದು ಸೀಮಿತ ಅವಧಿಯಲ್ಲಿ ನಡೆಯಲಿದೆ. ಈ ಮೂಲಕ ನಿಗದಿತ ದಿನಾಂಕದೊಳಗೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿ ದಂಡವನ್ನು ಪಾವತಿ ಮಾಡದೇ ತಪ್ಪಿಸಿಕೊಂಡು ಓಡಾಡುತ್ತಿರುವವರು ಮುಂದಿನ ಕಾನೂನಿನ ಕುಣಿಕೆಯಿಂದ ಬಚಾವ್‌ ಆಗಲು ಇದು ಸುವರ್ಣ ಅವಕಾಶವನ್ನು ನೀಡಿದೆ. ಫೆ 11ರಂದು ಲೋಕ ಅದಾಲತ್ ನಡೆಯಲಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಈ ನಿರ್ಧಾರವನ್ನು ಮಾಡಿದೆ ಎನ್ನಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top