Connect with us

Dvgsuddi Kannada | online news portal | Kannada news online

ಕುಕ್ಕುಟ-ಪಶು ಆಹಾರ ತಯಾರಿಕಾ ಘಟಕ ಸ್ಥಾಪನೆ, ಮಾರಾಟ ಕೇಂದ್ರ ತೆರೆಯಲು ಪರವಾನಗಿ ಕಡ್ಡಾಯ

ಪ್ರಮುಖ ಸುದ್ದಿ

ಕುಕ್ಕುಟ-ಪಶು ಆಹಾರ ತಯಾರಿಕಾ ಘಟಕ ಸ್ಥಾಪನೆ, ಮಾರಾಟ ಕೇಂದ್ರ ತೆರೆಯಲು ಪರವಾನಗಿ ಕಡ್ಡಾಯ

ದಾವಣಗೆರೆ: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ (Department of Animal Husbandry and Veterinary Services) ಕರ್ನಾಟಕ ಕುಕ್ಕುಟ, ಜಾನುವಾರು ಆಹಾರ (ತಯಾರಿಕೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987 ರ ಪ್ರಕಾರ ಕುಕ್ಕುಟ (ಕೋಳಿ) ಮತ್ತು ಜಾನುವಾರು (ಪಶು) ಆಹಾರ ತಯಾರಿಕಾ ಘಟಕಗಳು ಮತ್ತು ಮಾರಾಟ ಮಾಡಲು ಪರವಾನಗಿ (License) ಪಡೆಯುವುದು ಕಡ್ಡಾಯವಾಗಿದೆ.

ಈಗಾಗಲೇ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಮತ್ತು ಸ್ಥಳೀಯವಾಗಿ ಕೈಗಾರಿಕಾ ಇಲಾಖೆಯಿಂದ ಪರವಾನಗಿ ಪಡೆದಿದ್ದರೂ ಕೂಡ ಸರ್ಕಾರದ ಮೇಲ್ಕಾಣಿಸಿದ ಆಜ್ಞೆಯ ಪ್ರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ.

ಈ ರೀತಿ ಪಡೆದ ಪರವಾನಗಿಯು ಪ್ರತಿ ವರ್ಷ ಡಿಸೆಂಬರ್-31 ಕ್ಕೆ ಮುಕ್ತಾಯವಾಗುವುದರಿಂದ ನವೀಕರಣವನ್ನು 2025 ರ ಜನವರಿ 01 ರಿಂದ ಪಡೆಯಬೇಕಾಗಿರುತ್ತದೆ. ಪ್ರಸ್ತುತ ವರ್ಷ 2025ನೇ ಸಾಲಿಗೆ ಕುಕ್ಕುಟ ಮತ್ತು ಜಾನುವಾರು ಆಹಾರ ಉತ್ಪಾದಕರು ಮತ್ತು ಮಾರಾಟಗಾರರು ನೂತನ ಪರವಾನಗಿ ಪಡೆಯಲು ಮತ್ತು ನವೀಕರಿಸಲು ಸೇವಾ ಸಿಂಧು ಪೋರ್ಟಲ್ sevasindhusevices.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಸೂಕ್ತ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ ಪರವಾನಗಿ ಪಡೆಯಲು ಕೋರಲಾಗಿದೆ.

ಪರವಾನಗಿ ಪಡೆಯದೇ ಇದ್ದಲ್ಲಿ, ಅಂತಹ ಕುಕ್ಕುಟ ಮತ್ತು ಜಾನುವಾರು ಆಹಾರ ಉತ್ಪಾದಕರು ಮತ್ತು ಮಾರಾಟಗಾರರ ಮೇಲೆ, ಉತ್ಪಾದನೆ ಮತ್ತು ಮಾರಾಟ ನಿಯಂತ್ರಣ ಕಾಯ್ದೆಯಡಿ ಪ್ರಕಾರ ಕ್ರಮಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುಪಾಲನಾ ಇಲಾಖೆಯ ಸಂಸ್ಥೆಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪಶು ಆಸ್ಪತ್ರೆ, ಪಾಲಿಕ್ಲಿನಿಕ್‌ನ ಪರವಾನಗಿ ಪ್ರಾಧಿಕಾರ ಮತ್ತು ಉಪನಿರ್ದೇಶಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top