ಬೆಳಗಾವಿ : ಗ್ರಾಮೀಣ ಪ್ರದೇಶಗಳಲ್ಲಿನ ಕಂದಾಯ ಜಮೀನಿನ ನಿವೇಶನಗಳಲ್ಲಿ ಕೇವಲ ಕರಾರು ಒಪ್ಪಂದ ಪತ್ರದಲ್ಲಿ ಖರೀದಿಸಿ, ಮನೆ ನಿರ್ಮಿಸಿಕೊಂಡವರಿಗೆ ಹಕ್ಕುಪತ್ರ ನೀಡಿ, ಖಾತಾ ಒದಗಿಸುವುದಕ್ಕೆ ನಿಯಮ ರೂಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (Department of Rural Development) ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ಹೇಳಿದರು.
ದಾವಣಗೆರೆ: ಮಹಿಳಾ ಸ್ವ ಸಹಾಯ ಸಂಘಗಳಿಂದ ಅರ್ಜಿ ಆಹ್ವಾನ
ವಸತಿ ನಿರ್ಮಿಸಿಕೊಂಡವರಿಗೆ ಹಕ್ಕುಪತ್ರ ನೀಡಿ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಪ್ರಶ್ನೆಗೆ ಉತ್ತರಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಬಡ ಕುಟುಂಬಗಳು ಕಂಪ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಬೆಲೆಗೆ ನಿವೇಶನಗಳು ದೊರಕುತ್ತದೆ ಎಂದು ಈ ಹಿಂದೆ ಕಂದಾಯ ಜಮೀನಿನ ನಿವೇಶನಗಳಲ್ಲಿ ಜಮೀನಿನ ಮಾಲೀಕರೊಂದಿಗೆ ಅಗ್ರೀಮೆಂಟ್ ಪತ್ರ ಮಾಡಿಕೊಂಡು ಖರೀದಿಸಿ, ಈಗಾಗಲೇ ವಸತಿ ಮನೆಗಳನ್ನು ನಿರ್ಮಿಸಿಕೊಂಡು ವಾಸವಿದ್ದಾರೆ, ಇಂತಹ ಪ್ರಕರಣಗಳು ರಾಜ್ಯಾದ್ಯಂತ ಇವೆ. ಹೀಗಾಗಿ ಇಂತಹವರಿಗೆ ದಾಖಲೆಗಳನ್ನು ಪರಿಶೀಲಿಸಿ, ಹಕ್ಕುಪತ್ರ ಕೊಡಿಸಿ, ಇವರಿಗೆ ನ್ಯಾಯ ಒದಗಿಸಿಕೊಡಬೇಕಿದೆ ಎಂದು ಮನವಿ ಮಾಡಿದರು.
ದಾವಣಗೆರೆ: ಕಳ್ಳತನವಾಗಿದ್ದ 20.38 ಕೋಟಿ ರೂ. ಮೌಲ್ಯದ ಸ್ವತ್ತು ವಾರಸುದಾರರಿಗೆ ವಾಪಸ್
ಕ್ರಯಪತ್ರ ದಾಖಲೆ ಪರಿಶೀಲಿಸಿ ಇ-ಸ್ವತ್ತು
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಈಗಾಗಲೇ ಕಂದಾಯ ನಿವೇಶನಗಳಿಗೆ ಖರೀದಿಯ ಕ್ರಯಪತ್ರ ಮುಂತಾದ ದಾಖಲೆಗಳನ್ನು ಪರಿಶೀಲಿಸಿ, ಇ-ಸ್ವತ್ತು ನೀಡಿ, ಅವುಗಳನ್ನು ತೆರಿಗೆ ವ್ಯಾಪ್ತಿಗೆ ಸೇರಿಸಲು ಕ್ರಮ ವಹಿಸಿದ್ದು, ಈವರೆಗೆ 2,936 ಅರ್ಜಿಗಳು ಸ್ವೀಕೃತವಾಗಿವೆ.
ಗ್ರಾಮ ಪಂಚಾಯತಿಗಳಿಗೆ ಖಾತೆ ನೀಡುವ ಅಧಿಕಾರ
ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ ಅಥವಾ ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿನ ನಿವಾಸಿಗಳಿಗೆ ಭೂಸುಧಾರಣಾ ಕಾಯ್ದೆ ಅನ್ವಯ ಹಕ್ಕುಪತ್ರಗಳನ್ನು ಕಂದಾಯ ಇಲಾಖೆಯಿಂದ ವಿತರಿಸಲು ಅವಕಾಶ ಕಲ್ಪಿಸಲಾಗಿದ್ದು, ಕಂದಾಯ ಇಲಾಖೆಯಿಂದ ಹಕ್ಕುಪತ್ರ ಒದಗಿಸಿದಲ್ಲಿ, ಗ್ರಾಮ ಪಂಚಾಯತಿಗಳಿಗೆ ಖಾತೆ ವಿತರಣೆ ಮಾಡಲು ಅವಕಾಶವಿದೆ ಎಂದರು.
ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ
ಕೇವಲ ಅಗ್ರೀಮೆಂಟ್ ಪತ್ರದ ಆಧಾರದಲ್ಲಿ ನಿವೇಶನ ಖರೀದಿಸಿ, ವಸತಿ ನಿರ್ಮಿಸಿದವರಿಗೆ, ಒಂದು ಬಾರಿಯ ಪರಿಹಾರವಾಗಿ ಖಾತಾ ಮಾಡಿಕೊಡಲು ನಿಯಮಗಳನ್ನು ರೂಪಿಸಬೇಕಾಗುತ್ತದೆ. ಇದು ತಕ್ಷಣಕ್ಕೆ ಆಗುವ ಕೆಲಸವಲ್ಲ, ಇದಕ್ಕೆ ಸಾಕಷ್ಟು ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ಕಂದಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿ ಇದಕ್ಕೆ ಪರಿಹಾರ ಕಲ್ಪಿಸುವ ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.



