ಬೆಂಗಳೂರು: ಡ್ರೋನ್ ನಿರ್ವಹಣೆಯ ಮೂಲಕ ವೃತ್ತಿಜೀವನ ರೂಪಿಸಿಕೊಳ್ಳಲು ನೆರವಾಗಲು ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ‘ಡ್ರೋನ್ ಪೈಲಟ್’ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 15 ದಿನಗಳ ಕಾಲ ವಸತಿ ಸಹಿತ ತರಬೇತಿ ನೀಡಲಾಗುತ್ತದೆ. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವವರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತದೆ.
ಆಗಸ್ಟ್ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರುವ 18 ರಿಂದ 65 ವರ್ಷದೊಳಗಿನ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ petc.kar.nic.in ವೆಬ್‌ಸೈಟಿಗೆ ಭೇಟಿ ನೀಡಬಹುದು. ಮೊದಲ ಹಂತದಲ್ಲೇ 1,248 ಜನರು ಆಸಕ್ತಿ ತೋರಿ ಅರ್ಜಿ ಸಲ್ಲಿಸಿದ್ದಾರೆ. ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ, ಕೃಷಿ, ಗಣಿ, ಲಾಜಿಸ್ಟಿಕ್ಸ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಡ್ರೋನ್ ಗಳು ಬಳಕೆಯಾಗುತ್ತಿರುವುದರಿಂದ ಉದ್ಯೋಗವಕಾಶಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಡ್ರೋನ್ ನಿರ್ವಹಣೆಯ ತರಬೇತಿ (Drone Pilot Training) ನೀಡುವ ಯೋಜನೆಯನ್ನು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿತ್ತು. ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಪುರುಷರು ಹಾಗೂ ಮಹಿಳೆಯರು ಸೇರಿ 5 ಸಾವಿರ ಜನರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.
- ಅರ್ಹತೆ
- ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
- ದೈಹಿಕ ಅಂಗವಿಕಲ ಮೀಸಲಾತಿಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿ, ನಿಗಧಿತಪ್ರಾಧಿಕಾರದಿಂದ ನಿಗಧಿಪಡಿಸಲಾದ ಕೊನೆಯ ದಿನಾಂಕದೊಳಗೆ ಅಂಗವಿಕಲ
ಪಮಾಣ ಪತ್ರ ಪಡೆದಿರಬೇಕು - ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು
- ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.8.00 ಲಕ್ಷ ಮೀರಿರಬಾರದು
- ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಮೊದಲು ಅರ್ಜಿ ಸಲ್ಲಿಸದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು
ಹೆಚ್ಚಿನ ಮಾಹಿಗೆ ವೆಬ್ ಸೈಟ್ www.petc.kar.nic.in ಭೇಟಿ ನೀಡಿ. ಅರ್ಜಿ ಸಲ್ಲಿಸಲಿ 15.08.2024 ಕೊನೆಯ ದಿನವಾಗಿದೆ.



