Connect with us

Dvgsuddi Kannada | online news portal | Kannada news online

ಧಾರವಾಡ ಭೀಕರ ಅಪಘಾತ: ಆಸ್ಪತ್ರೆಯಲ್ಲಿ ಮತ್ತಿಬ್ಬರು ಸಾವು; ಮೃತರ ಸಂಖ್ಯೆ 9 ಏರಿಕೆ

ಪ್ರಮುಖ ಸುದ್ದಿ

ಧಾರವಾಡ ಭೀಕರ ಅಪಘಾತ: ಆಸ್ಪತ್ರೆಯಲ್ಲಿ ಮತ್ತಿಬ್ಬರು ಸಾವು; ಮೃತರ ಸಂಖ್ಯೆ 9 ಏರಿಕೆ

ಧಾರವಾಡ: ತಾಲ್ಲೂಕಿನ ಬಾಡ ಕ್ರಾಸ್ ಬಳಿ ಕ್ರೂಸರ್ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತಿಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 13 ಜನರಿಗೆ ಗಾಯಗಳಾಗಿವೆ.

ಮನಸೂರಿನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿ ರಾತ್ರಿ 2ರ ಸುಮಾರಿಗೆ ಬೆನಕನಕಟ್ಟಿಗೆ ಮರಳುತ್ತಿದ್ದರು. 21 ಜನರಿದ್ದ ವಾಹನ ನಿಗದಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನನ್ಯಾ (14), ಹರೀಶ್ (13), ಶಿಲ್ಪಾ (34), ನಿಲವ್ವ (60), ಮಧುಶ್ರೀ (20), ಮಹೇಶ್ವರ (11), ಶಂಭುಲಿಂಗಯ್ಯ (35) ಮೃತಪಟ್ಟಿದ್ದರು. ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಚಿಕಿತ್ಸೆ ಫಲಿಸದೆ ಇಬ್ಬರು ಮೃತರಾಗಿದ್ದಾರೆ. ಚನ್ನವ್ವ (45) ಹಾಗೂ ಮನುಶ್ರೀ (16) ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಘಟನೆಯಲ್ಲಿ 13 ಜನರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದೆ.ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top