13 ಜನ ಬಲಿ ಪಡೆದ ಧಾರವಾಡ ರಾಷ್ಟ್ರೀಯ ಹೆದ್ದಾರಿಯನ್ನು 6 ಪಥವಾಗಿ ವಿಸ್ತರಿಸಲು ಸಚಿವ ನಿತಿನ್ ಗಡ್ಕರಿ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಧಾರವಾಡ: ದಾವಣಗೆರೆಯ 13 ಪ್ರಯಾಣಿಕರನ್ನು ಬಲಿ ಪಡೆದ  ಹುಬ್ಬಳ್ಳಿ-ಧಾರವಾಡ ನಡುವಿನ 30 ಕಿ. ಮೀ. ಬೈಪಾಸ್ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ ಮಾರ್ಪಡಿಸಲು ಕೂಡಲೇ ಟೆಂಡರ್ ಕರೆಯುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸೂಚನೆ ನೀಡಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಕರ್ನಾಟಕದ ಹಲವು ಸಂಸದರು  ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದರು. ರಾಜ್ಯದ ರಸ್ತೆ ಯೋಜನೆಗೆಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ನಿತಿನ್ ಗಡ್ಕರಿ ಅವರು ಹುಬ್ಬಳ್ಳಿ-ಧಾರವಾಡ ನಡುವಿನ 30 ಕಿ. ಮೀ. ಬೈಪಾಸ್ ರಸ್ತೆಯನ್ನು ಷಟ್ಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಕೂಡಲೇ ಟೆಂಡರ್ ಕರೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

FB IMG 1612606379139

ಈ ಯೋಜನೆಗಾಗಿ ಈಗಾಗಲೇ ವಿಸ್ತೃತ ಯೋಜನಾ ವರದಿ ತಯಾರು ಮಾಡಲಾಗಿದೆ. ಜನರ ಅನುಕೂಲಕ್ಕಾಗಿ ಆರ್. ಓ. ಬಿ. ಮತ್ತು ಆರ್. ಯು. ಬಿ. ನಿರ್ಮಾಣ ಮಾಡಲು ಸೂಚನೆ ನೀಡಲಾಗಿದೆ. ರಸ್ತೆ ಅಗಲೀಕರಣಕ್ಕೆ 33 ಹೆಕ್ಟೇರ್ ಭೂಸ್ವಾಧೀನ ಅಗತ್ಯವಿದೆ. ಭೂಮಿ ವಶಪಡಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಸೂಚಿಸಲಾಗಿದೆ.

ರಸ್ತೆಯನ್ನು ನಿರ್ಮಾಣ ಮಾಡಿ ನಿರ್ವಹಣೆಯನ್ನು ನಂದಿ ಹೈವೇ ಇನ್‌ಪ್ರಾಸ್ಟ್ರಕ್ಚರ್ ಕಂಪನಿ ಮಾಡುತ್ತಿದೆ. 6 ಪಥದ ರಸ್ತೆ ನಿರ್ಮಾಣ ಮಾಡಲು ಕಂಪನಿಯವರು ಸಹ ಒಪ್ಪಿಗೆ ನೀಡಿದ್ದಾರೆ. 6 ಪಥದ ರಸ್ತೆ ನಿರ್ಮಾಣದ ಜೊತೆಗೆ ಜನರ ಅನುಕೂಲಕ್ಕಾಗಿ ಎರಡೂ ಕಡೆ ಸರ್ವೀಸ್ ರಸ್ತೆಯನ್ನು ನಿರ್ಮಾಣ ಮಾಡಲಾಗುತ್ತದೆ.

accident davangere.jpg 2

 

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಕೆಲವು ದಿನಗಳ ಹಿಂದೆ ಭೀಕರ ರಸ್ತೆ ಅಪಘಾತದಲ್ಲಿ ದಾವಣಗೆರೆ ಮೂಲದ 13 ಜನರು ಮೃತಪಟ್ಟಿದ್ದರು. ಈ ಅಪಘಾತದ ನಂತರ ಬೈಪಾಸ್ ರಸ್ತೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಇದಲ್ಲದೆ ಫೆ. 06 ರಂದು ಮೃತಪಟ್ಟ ಕುಟುಂಬದವರು ಘಟನಾ ಸ್ಥಳಕ್ಕೆ ಹೋಗಿ ಜಾಗೃತಿ ಜಾಥಾ ಮಾಡಿದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *