ಬಳ್ಳಾರಿ: ಒಂದು ತಿಂಗಳಲ್ಲಿ 2 ಸಾವಿರ ವೈದ್ಯರು, 700 ಪ್ಯಾರಾಮೆಡಿಕಲ್, ನರ್ಸ್ ಸಿಬ್ಬಂದಿಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವ ವೈದ್ಯರಿಗೆ ಬಡ್ತಿ ಮತ್ತು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಈ ಬಗ್ಗ ಕಾನೂನುಗಳನ್ನು ಬದಲಾವಣೆ ಮಾಡಲಾಗುವುದು. ಖಾಸಗಿ – ಸರ್ಕಾರಿ ಸಹಭಾಗಿತ್ವದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಸಿಎಸ್‍ಆರ್ ಸಮಿತಿ ರಚಿಸಲಾಗದೆ. ಗೀತಾಂಜಲಿ ಕಿರ್ಲೋಸ್ಕರ್ ಅವರನ್ನು ಗೌರವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
173 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ವಿಮ್ಸ್ ತಲೆ ಎತ್ತಿದೆ. ಗತವೈಭವವನ್ನು ಆರೋಗ್ಯಕ್ಷೇತ್ರದಲ್ಲಿ ಮರುಕಳಿಸುವ ನಿಟ್ಟಿನಲ್ಲಿ ವಿಮ್ಸ್ ಸಂಸ್ಥೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿಮ್ಸ್ ಕೇವಲ ರಾಜದಿಂದ ಮಾತ್ರವಲ್ಲ, ಆಂಧ್ರ, ತೆಲಂಗಾಣ ರಾಜ್ಯದಿಂದಲೂ ಚಿಕಿತ್ಸೆಗೆ ಬರುತ್ತಿದ್ದಾರೆ ಎಂದರು.



