ದಾವಣಗೆರೆ: ಅಜೀಂ ಪ್ರೇಂ ಜೀ ಫೌಂಡೇಶನ್ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ದೀಪಿಕಾ ವಿದ್ಯಾರ್ಥಿ ವೇತನ ಎಂಬ ಒಂದು ವಿನೂತನ ಕಾರ್ಯಕ್ರಮ ಆರಂಭಿಸಿದೆ. ಈ ವೇತನದಡಿ ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ರೂ.30,000 ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ: 56 ಸಾವಿರಕ್ಕೆ ಕುಸಿದ ಅಡಿಕೆ ದರ; ಏಕಾಏಕಿ ಕುಸಿಯಲು ಕಾರಣ ಏನು..?
ಪ್ರತಿ ವರ್ಷ 30 ಸಾವಿರ
ಸರ್ಕಾರಿ ಕಾಲೇಜುಗಳಲ್ಲಿ ಓದುವ ಬಡ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ನೂತನ ಯೋಜನೆಯನ್ನು ಅಜಿಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಸರ್ಕಾರ ಜಾರಿಗೆ ತಂದಿದೆ. ಯೋಜನೆ ಮೂಲಕ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30 ಸಾವಿರ ವೇತನ ಸಿಗಲಿದೆ.
ಜ.31 ಕಡೆಯ ದಿನ
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯನ್ನು ಸರ್ಕಾರಿ ಶಾಲೆಯಲ್ಲಿ ಓದಿ ಪ್ರಸ್ತುತ ಪದವಿಯನ್ನು ಖಾಸಗಿ ಅಥವಾ ಸರ್ಕಾರಿ ಯಾವುದಾದರೂ ಕಾಲೇಜಿನಲ್ಲಿ ಓದುತ್ತಿರುವಂತಹ ಪದವಿ ಮೊದಲನೇ ವರ್ಷದ ವಿದ್ಯಾರ್ಥಿನಿಯರಿಗೆ ರೂ.30,000 ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇದಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಜ.31 ಕಡೆಯ ದಿನವಾಗಿದ್ದು, ಅರ್ಜಿ ಸಲ್ಲಿಕೆ ವಿಧಾನ, ಇತರೆ ಹೆಚ್ಚಿನ ಮಾಹಿತಿಗಾಗಿ ಈ https://www.youtube.com/watch?v=dR0q9nozo-4, https://www.youtube.com/@azimpremjischolarship ಯೂಟ್ಯೂಬ್ ಲಿಂಕನ್ನು ಸಂಪರ್ಕಿಸಬಹುದು.
ಈ ಲಿಂಕ್ https://azimpremjifoundation.org/what-we-do/education/azim-premji-scholarship/ ಮೂಲಕವೂ ಹೆಚ್ಚಿನ ಮಾಹಿತಿ ಪಡೆಯಬಹುದು.
ದಾವಣಗೆರೆ: ಜಿಲ್ಲೆಯ ವಿವಿಧಡೆ ಕಳ್ಳತನ ಮಾಡುತ್ತಿದ್ದ ತಂದೆ, ಮಕ್ಕಳ ಬಂಧನ; ಬರೋಬ್ಬರಿ 10.90 ಲಕ್ಷ ಮೌಲ್ಯದ ಸ್ವತ್ತು ವಶ
37 ಸಾವಿರ ವಿದ್ಯಾರ್ಥಿನಿಯರಿಗೆ ಲಾಭ
ದೀಪಿಕಾ ವಿದ್ಯಾರ್ಥಿ ವೇತನ ಮೂಲಕ ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಲಾಭವಾಗಲಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವುದಕ್ಕೆ ವಿದ್ಯಾರ್ಥಿನಿಯರು ಹತ್ತನೇ ತರಗತಿಯನ್ನು ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು.
ಈ ಯೋಜನೆಯ ಲಾಭ ಪಡೆಯಬೇಕಾದರೆ, ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಾಗಿದ್ದು, ಇಂತಹ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ.



