ಬೆಂಗಳೂರು; ಸರ್ಕಾರ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸಿದ ಹೊತ್ತಿನಲ್ಲಿಯೇ ಸರ್ಕಾರ ಈಗ ಪದವಿ ಶಾಕ್ ಕೊಡಲು ಮುಂದಾಗಿದೆ. ಪದವಿ ಕೋರ್ಸ್ಗಳ ಶುಲ್ಕವನ್ನು ಶೇ10ರಷ್ಟು ಏರಿಕೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದೆ.
ಇದರಿಂದ ಬಡ ಪೋಷಕರಿಗೆ ಆರ್ಥಿಕ ಹೊರೆ ಹೆಚ್ಚಲಿದೆ. ಪಿಯುಸಿ ಮುಗಿಸಿ ಉನ್ನತ ಶಿಕ್ಷಣ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳ ಮೇಲೆ ಇದು ಪರಿಣಾಮ ಬೀರಲಿದೆ. ಬಿಕಾಂ, ಬಿಎ, ಬಿಎಸ್‌ಸಿ ಸೇರಿದಂತೆ ಅನೇಕ ಪದವಿ ಪ್ರವೇಶಕ್ಕೆ ಕಳೆದ ವರ್ಷ ಇದ್ದ ಶುಲ್ಕಕ್ಕೆ ಶೇ.10ರಷ್ಟು ಏರಿಕೆಗೆ ರಾಜ್ಯ ಸರ್ಕಾರ ಅನುಮತಿ ಕೊಟ್ಟಿದೆ.
2024ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಹಾಗೂ ಯೂನಿವರ್ಸಿಟಿಗಳಲ್ಲಿ ಶುಲ್ಕವನ್ನು ಏರಿಕೆ ಮಾಡಬಹುದು. ವಿಶ್ವವಿದ್ಯಾಲಯಗಳ ಆದಾಯ ಕೊರತೆನ್ನು ಎದುರಿಸುತ್ತಿವೆ. ಇದರಿಂದಾಗಿ ಪ್ರಸಕ್ತ ವರ್ಷದಲ್ಲಿ ಶೇ.10ರಷ್ಟು ಶುಲ್ಕ ಹೆಚ್ಚಿಸಲು ಅವಕಾಶ ನೀಡಲಾಗಿದೆ. ಹೀಗಾಗಿ ಈ ವರ್ಷ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಬಿಸಿ ತಟ್ಟಲಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ತೆರಿಗೆ ಹೆಚ್ಚಳ, ಕರೆಂಟ್ ಬಿಲ್ ಏರಿಕೆ, ಮದ್ಯದ ಬೆಲೆ ಕೂಡ ಏರಿಕೆ ಮಾಡಲಾಗಿದೆ.ಈಗ ಕಾಲೇಜು ಶುಲ್ಕ ಏರಿಕೆ ಮಾಡಲಾಗಿದೆ.



