Connect with us

Dvgsuddi Kannada | online news portal | Kannada news online

ನ.23ರಿಂದ 5,6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಸಂವೇದಾ ಇ-ಕ್ಲಾಸ್

ಪ್ರಮುಖ ಸುದ್ದಿ

ನ.23ರಿಂದ 5,6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಸಂವೇದಾ ಇ-ಕ್ಲಾಸ್

ಬೆಂಗಳೂರು: ನ. 23ರಿಂದ 5, 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಸಂವೇದಾ ಇ-ಕ್ಲಾಸ್ ಆರಂಭವಾಗಲಿದೆ. ಕೋವಿಡ್ ನಿಂದಾಗಿ ಶಾಲೆ ಆರಂಭ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರದಿಂದ ಇ-ತರಗತಿಗಳನ್ನು ಆರಂಭಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈಗಾಗಲೇ 8, 9 ಹಾಗೂ 10ನೇ ತರಗತಿಗಳಿಗೆ ಸಂವೇದಾ ಕ್ಲಾಸ್ ಆರಂಭವಾಗಿದ್ದು, ಇದೀಗ ನವೆಂಬರ್ 23ರಿಂದ ದೂರದರ್ಶನ ಚಂದನ ವಾಹಿನಿಯಲ್ಲಿ 5, 6 ಮತ್ತು 7ನೇ ತರಗತಿಗಳಿಗೆ ಇ-ಕ್ಲಾಸ್ ವಿಸ್ತರಿಸಲಾಗಿದೆ. ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್, ತೃತಿಯ ಭಾಷೆ ಹಿಂದಿ ಹಾಗೂ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳ ತರಗತಿಗಳು ಆರಂಭವಾಗಲಿದ್ದು, ವೇಳಾಪಟ್ಟಿಯನ್ನು ಕೂಡ ಪ್ರಕಟಿಸಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 8 ರಿಂದ 9:30ರವರೆಗೆ ಹಾಗೂ ಸಂಜೆ 5:30 ರಿಂದ 6ರವರೆಗೆ ಪ್ರಸಾರವಾಗಲಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ನಿರಂತರ ಕಲಿಕೆಗಾಗಿ ಸಂವೇದಾ ತರಗತಿಗಳು ಆರಂಭವಾಗಿದ್ದು, ಈ ತರಗತಿಗಳು ಡಿ.25ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top