Connect with us

Dvgsuddi Kannada | online news portal | Kannada news online

ಅರಿವು ಯೋಜನೆಯಡಿ ವೃತ್ತಿಪರ ಕೋರ್ಸ್ ಗಳಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

loan

ದಾವಣಗೆರೆ

ಅರಿವು ಯೋಜನೆಯಡಿ ವೃತ್ತಿಪರ ಕೋರ್ಸ್ ಗಳಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: 2025-26 ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(ಕೆಇಎ) ಆಯ್ಕೆಯಾಗುವ ಫ್ರೆಶ್/ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅರಿವು ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು (education loan) ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯಾವ ಕೋರ್ಸ್ ಗಳಿಗೆ ಸಾಲ ಸೌಲಭ್ಯ

ವೃತ್ತಿಪರ ಕೋರ್ಸ್ ಗಳಾದ ಎಂಬಿಬಿಎಸ್, ಬಿಡಿಎಸ್, ಬ್ಯಾಚುಲರ್ ಆಫ್ ಆಯುಷ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬ್ಯಾಚುಲರ್ ಆಫ್ ಇಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ, ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ ಹಾಗೂ ಫಾರ್ಮ್ ಸೈನ್ಸ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಕೊನೆ ದಿನ ಯಾವಾಗ..?

ಮೇ.5 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, www.kmdconline.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಎಸ್‌ಎಸ್‌ಎಲ್‌ಸಿ ಮಾರ್ಕ್ಸ್ ಕಾರ್ಡ್/ಪಿಯುಸಿ ಮಾರ್ಕ್ಸ್ ಕಾರ್ಡ್, ಆಧಾರ್ ಕಾರ್ಡ್, ಜಾತಿ ಹಾಗೂ ಆದಾಯ ಪ್ರಮಾಣ ಪತ್ರ(8 ಲಕ್ಷ ಒಳಗಿದ್ದವರಿಗೆ), ವಿದ್ಯಾರ್ಥಿ/ ಪೋಷಕರ ಫೋಟೋ, ಸಿಇಟಿ/ನೀಟ್ ಹಾಲ್ ಟಿಕೆಟ್, ಇಂಡೆಮ್ನಿಟಿ ಬಾಂಡ್/ನೋಟರಿ, ವಿದ್ಯಾರ್ಥಿ ಮತ್ತು ಪೋಷಕರ ಸೆಲ್ಫ್ ಡಿಕ್ಲರೇಷನ್ ಲೆಟರ್ ಈ ಎಲ್ಲಾ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಜಿಲ್ಲಾ ವ್ಯವಸ್ಥಾಪಕರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪರನ್ನು ಸಂಪರ್ಕಿಸಿ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top