ಗೌರಿಬಿದನೂರು: ರಾಜ್ಯದಲ್ಲಿ ಶೀಘ್ರವೇ ಒಂದರಿಂದ ಎಂಟನೇ ತರಗತಿಗಳನ್ನು ಆರಂಭಿಸಲು ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದರಿಂದ ಎಂಟನೇ ತರಗತಿಗಳನ್ನು ಆರಂಭಿಸುವ ಕುರಿತು ಫೆಬ್ರವರಿ 2ನೇ ವಾರ ಇಲ್ಲವೇ 3 ನೇ ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಆರೋಗ್ಯ ಇಲಾಖೆ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ಒಂದರಿಂದ ಎಂಟನೇ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನಿಸಲಾಗುವುದು. 9, 10 ಹಾಗೂ ಪಿಯುಸಿ ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿದ್ದು, ಶೇಕಡ 80 ರಷ್ಟು ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ.ಆರರಿಂದ ಎಂಟನೇ ತರಗತಿ ಮಕ್ಕಳಿಗೆ ವಿದ್ಯಾಗಮ ಕಲಿಕೆ ಮುಂದುವರೆದಿದೆ ಎಂದು ಸಚಿವರು ಹೇಳಿದ್ದಾರೆ