ಬೆಂಗಳೂರು; ಹೊಸಕೋಟೆ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಸಿದ್ದು, ಅತ್ಯಂತ ಸಿರಿವಂತ ರಾಜಕಾರಣಿಗಳಲ್ಲಿ ಒಬ್ಬರಾದ ಎಂಟಿಬಿ ನಾಗರಾಜ್ 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ.
ಹೊಸಕೋಟೆ ನಗರದಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ರ್‍ಯಾಲಿ ನಡೆಸಿ ತಾಲೂಕು ಕಛೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಳೆದ ಸಲ ಚುನಾವಣೆಯ ವೇಳೆ 1015 ಕೋಟಿ ಘೋಷಣೆ ಮಾಡಿದ್ದರು. ಐದು ವರ್ಷದಲ್ಲಿ 495 ಕೋಟಿ ರೂಪಾಯಿ ಆಸ್ತಿ ಹೆಚ್ಚಳ ಮಾಡಿಕೊಂಡಿದ್ದಾರೆ.



