Connect with us

Dvgsuddi Kannada | online news portal | Kannada news online

ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಜೇನುಗಾರಿಕೆ 30 ದಿನದ ತರಬೇತಿಗೆ ಅರ್ಜಿ ಆಹ್ವಾನ

Beekeeping Training

ಕೃಷಿ ಖುಷಿ

ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಜೇನುಗಾರಿಕೆ 30 ದಿನದ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ತೋಟಗಾರಿಕೆ ಇಲಾಖೆಯಿಂದ ಮಡಕೇರಿಯ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ನವೆಂಬರ್ 05ರಿಂದ 3 ತಿಂಗಳು ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಸಕ್ತ ರೈತರು ಅರ್ಜಿ ಸಲ್ಲಿಸಬಹುದು.

ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ 18-35 ವಯಸ್ಸಿನ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳು ಅಥವಾ ಅಭ್ಯರ್ಥಿಗಳ ತಂದೆ/ತಾಯಿ/ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತೋಟಗಾರಿಕೆ ಇಲಾಖೆಯ ವೆಬ್‌ಸೈಟ್ https://horticulturedir.karnataka.gov.in ಅಥವಾ ಶಿವಮೊಗ್ಗ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರು ಕಚೇರಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ ಹಾಗು ಸೂಕ್ತ ದಾಖಲೆಗಳನ್ನು ಲಗತ್ತಿಸಿ ಅ.28 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222794/ 9686950460 ಗಳನ್ನು ಸಂಪರ್ಕಿಸುವುದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕೃಷಿ ಖುಷಿ

To Top