Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ನಾಳೆ ಮತ್ತೆ ರೈತ ಹೋರಾಟ; ರಾಜ್ಯ, ರಾಷ್ಟ್ರೀಯ ಹೆದ್ದಾರಿ ಬಂದ್

ಪ್ರಮುಖ ಸುದ್ದಿ

ರಾಜ್ಯದಲ್ಲಿ ನಾಳೆ ಮತ್ತೆ ರೈತ ಹೋರಾಟ; ರಾಜ್ಯ, ರಾಷ್ಟ್ರೀಯ ಹೆದ್ದಾರಿ ಬಂದ್

ಬೆಂಗಳೂರು: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ವಿರೋಧಿಸಿ ನಾಳೆ ರಾಜ್ಯದಲ್ಲಿ ರಾಜ್ಯ, ರಾಷ್ಟ್ರೀಯ ಹೆದ್ದಾರಿ ಬಂದ್ ಆಗಲಿದೆ.

ದೆಹಲಿಯಲ್ಲಿ ಪ್ರತಿಭಟನೆ ನಿರತ ರೈತರ ಮೇಲಿನ ಕೇಂದ್ರ ಸರ್ಕಾರದ ದೌರ್ಜನ್ಯ ಖಂಡಸಿ, ನಾಳೆ ರಾಜ್ಯದ ರೈತರು ಮಧ್ಯಾಹ್ನ 12 ರಿಂದ 3 ಗಂಟೆವರೆಗೆ ರಾಜ್ಯಾದ್ಯಂತ ರಾಷ್ಟ್ರೀಯ ಮತ್ತು ಹೆದ್ದಾರಿ ರಸ್ತೆ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ರೈತ ಮುಖಂಡ ಕುರುಬನೂರು ಶಾಂತಕುಮಾರ್‌ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಜನರಿಗೆ ಯಾವುದೇ ತೊಂದರೆ ಆಗದಂತೆ ಪ್ರತಿಭಟನೆ ನಡೆಸಲಾಗುವುದು,  ಈ ಸಮಯದಲ್ಲಿ ನಮಗೆ ಬೆಂಬಲ ನೀಡಿ, ನಮ್ಮ ಹೋರಾಟವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದ ಬಹುತೇಕ ರಸ್ತೆಗಳು ಬಂದ್‌ ಆಗಲಿದ್ದು, ಈ ಹೋರಾಟವು ರೈತರ ಅಳಿವು-ಉಳಿವಿನ ಪ್ರಶ್ನೆಯಾಗಿದ್ದು, ಇದಕ್ಕೆ ರೈತರು, ರೈತರ ಪರ ಕಾಳಜಿಯ ಉಳ್ಳವರು ಸಾಥ್‌ ನೀಡಬೇಕು ಎಂದು ಒತ್ತಾಯಿಸಿದ್ದಾರೆ

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});