ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಎಫ್ ಡಿಎ ಪರೀಕ್ಷೆ ನಾಳೆ ನಡೆಯಲಿದೆ. ಈ ಬಾರಿ ಯಾವುದೇ ಅಕ್ರಮ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಪಿಎಸ್ ಸಿ ಕಾರ್ಯದರ್ಶಿ ಜಿ. ಸತ್ಯವತಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯದ ಎಲ್ಲಾ ಘಟಕಗಳು ಸೇರಿ ಒಟ್ಟು 1,057 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3.74 ಲಕ್ಷ ಅಭ್ಯರ್ಥಿಗಳು ಹಾಜರಾಗುತ್ತಿದ್ದಾರೆ. ಪರೀಕ್ಷಾ ಅಕ್ರಮಗಳಿಗೆ ಅವಕಾಶ ನೀಡದಂತೆ ಇದೇ ಮೊದಲ ಬಾರಿಗೆ 433 ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದರು.
ಇನ್ನು ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಇದೇ ಮೊದಲ ಬಾರಿಗೆ ಪರೀಕ್ಷಾ ದಿನದಂದು ಸಿಟ್ಟಿಂಗ್ ಸ್ಕ್ವಾಡ್ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.



