ಬೆಂಗಳೂರು: ಬರ ಪರಿಹಾರ ಪಡೆಯುವುದಕ್ಕೆ ರೈತರ ಗುರುತಿನ ಚೀಟಿ (FID) ಕಡ್ಡಾಯವಾಗಿದೆ. ಈ ಗುರುತಿನ ಚೀಟಿ ಪಡೆಯಲು ರೈತರು ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ಮಾಹಿತಿಯನ್ನು ನಮೂದಿಸಿ FID ಪಡೆಯುವುದು ಕಡ್ಡಾಯ. ಒಂದು ವೇಳೆ ನಮೂದಿಸದ ರೈತರಿಗೆ ಬರ ಪರಿಹಾರ ಸಿಗುವುದಿಲ್ಲ. ಈ ಹಿನ್ನಲೆಯಲ್ಲಿ ಡಿ.22ರವರೆಗೆ ಪ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸುವುದಕ್ಕೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ರೈತರ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸುವಂತೆ ಕಳೆದ ಎರಡು ತಿಂಗಳಿನಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರಂತರವಾಗಿ ಸೂಚಿಸಲಾಗುತ್ತಿದೆ. ಆದರೂ, ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ಮಾಹಿತಿ ಶೇ.70ರಷ್ಟು ಮೀರಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ರೈತರಿಗೆ ಅನ್ಯಾಯವಾಗಲಿದೆ ಎಂದರು.
ಬರ ಪರಿಹಾರ ಫ್ರೂಟ್ಸ್ ದತ್ತಾಂಶವನ್ನು ಆಧರಿಸಿರುವ ಕಾರಣ ಜಿಲ್ಲಾಧಿಕಾರಿಗಳು ಮಾಡುವ ಸಣ್ಣ ತಪ್ಪು ಸಹ ರೈತರ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಇನ್ನಾದರೂ ಅಧಿಕಾರಿಗಳು ಆಂದೋಲನ ಮಾದರಿಯಲ್ಲಿ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು. ಅವರು ಸೂಚಿಸಿದರು. ರೈತರು ತಪ್ಪದೇ ಪ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಜಮೀನಿನ ಮಾಹಿತಿಯನ್ನು ನಮೂದಿಸಬೇಕಾಗಿದೆ. ಇಲ್ಲವಾದಲ್ಲಿ ರಾಜ್ಯ ಸರ್ಕಾರದಿಂದ ನೀಡಲಾಗುವಂತ ಬರ ಪರಿಹಾರ ಡಿಬಿಟಿ ಮೂಲಕ ವರ್ಗಾವಣೆ ಆಗುವುದಿಲ್ಲ ಎಂದು ತಿಳಿಸಿದರು.



