ಬೆಂಗಳೂರು; ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಶೋರೂಂನಲ್ಲಿ ಬೆಂಕಿ ಧಗಧಗಿಸಿದೆ. ಈ ಬೆಂಕಿಗೆ ಯುವತಿಯೊಬ್ಬಳು ಮೃತಪಟ್ಟ ಶಂಕೆವ್ಯಕ್ತವಾಗಿದೆ.
ರಾಜ್ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದದೆ. ನೋಡ ನೋಡುತ್ತಿದಂತೆ ಇಡೀ ಶೋರೂಂಗೆ ಬೆಂಕಿ ವ್ಯಾಪಿಸಿದ್ದು, ಬೆಂಕಿಯ ಜ್ವಾಲೆಗೆ ಎಲೆಕ್ಟ್ರಿಕ್ ಸ್ಕೂಟರ್ ಗಳು ಸುಟ್ಟು ಹೋಗಿವೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿಯನ್ನು ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.