ದಾವಣಗೆರೆ: ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿಯಿಂದ 2026ರಲ್ಲಿ ಯುಪಿಎಸ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಉಚಿತ ತರಬೇತಿ, ಊಟ, ವಸತಿ ಸೌಲಭ್ಯ
ಕೇಂದ್ರ ಲೋಕಸೇವಾ ಆಯೋಗದ ಐಎಎಸ್, ಐಪಿಎಸ್ , ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಆಡಳಿತಾತ್ಮಕ
ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಊಟ, ವಸತಿ ಸೌಲಭ್ಯ ಇರುತ್ತದೆ. ಬೆಂಗಳೂರಿನ ವಿಜಯನಗರದ ಬಡಾವಣೆಯಲ್ಲಿ ಉಚಿತ ತರಗತಿ ನಡೆಸಲಿದ್ದು, ಹೆಚ್ಚಿನ ಮಾಹಿತಿಗೆ: 96639 00439, 99161 16615,99017 94035 ನ್ನು ಸಂಪರ್ಕಿಸಬಹುದು ಎಂದುಮಹಾಸಭಾ ಅಧ್ಯಕ್ಷ ಆರ್.ಪಿ.ರವಿಶಂಕರ್ ತಿಳಿಸಿದ್ದಾರೆ.