ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಮೂರು ದಿನದ ಷರತ್ತು ಬದ್ಧ ಅನುಮತಿ ನೀಡಿದೆ.
ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ಅನುಮತಿ ನೀಡಲಾಗಿದೆ. ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ನೀಡಿದ ವರದಿ ಆಧರಿಸಿ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ 3 ದಿನ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿದೆ. ಈ ವೇಳೆ ಯಾವುದೇ ಮೆರವಣಿಗೆಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.
ಮನೋರಂಜನೆ, ಮೆರವಣಿಗೆ ಮಾಡುವಂತಿಲ್ಲ.ಇನ್ನು ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲೇ ಗಣೇಶ ವಿಸರ್ಜನೆ ಮಾಡಬೇಕು ಎಂದು ಸೂಚಿಸಿದ್ದಾರೆ.



