Connect with us

Dvgsuddi Kannada | online news portal | Kannada news online

ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಗುಡ್ ‌ನ್ಯೂಸ್ ; ಎಲ್ಲಾ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ವಿತರಣೆಗೆ ಗ್ರೀನ್ ಸಿಗ್ನಲ್

ಪ್ರಮುಖ ಸುದ್ದಿ

ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಗುಡ್ ‌ನ್ಯೂಸ್ ; ಎಲ್ಲಾ ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ವಿತರಣೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರ ಗುಡ್ ‌ನ್ಯೂಸ್ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಕಾರ್ಡ್ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದೆ.

ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ.

  • ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಕಾರ್ಡ್
  • ಇ-ಶ್ರಮ್ ಕಾರ್ಡ್ ಇದ್ದವರು ಆಹಾರ ಇಲಾಖೆ ಸಂಪರ್ಕಿಸಿ
  • ಹೆಚ್ಚಿನ ಮಾಹಿತಿಗೆ ಟೋಲ್ ಫ್ರೀ -1800-425-9339 ಅಥವಾ ಸಹಾಯವಾಣಿ 1967 ಸಂಪರ್ಕಿಸಿ

ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ತಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967 ಕ್ಕೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top