ಬೆಂಗಳೂರು: ಉದ್ಯೋಗ ಆಕಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತನೆ; ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ; ಸಿಎಂ ಸಿದ್ದರಾಮಯ್ಯ
ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯನ್ನು ಸಡಿಲ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.ಸಾಮಾನ್ಯ ವರ್ಗದ ವಯೋಮಿತಿಯನ್ನು 35 ರಿಂದ 40 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: 1 ಕೋಟಿಗೆ ಬೇಡಿಕೆ; ಮಹಿಳೆ ಬಂಧನ-4.5 ಲಕ್ಷ ವಶ
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಈವರೆಗೆ ಇದ್ದಂತ ವಯೋಮಿತಿಯನ್ನು ಮತ್ತಷ್ಟು ಸಡಿಲಿಕೆ ಮಾಡಲು ನಿರ್ಧರಿಸಿದೆ. ಎಲ್ಲಾ ವರ್ಗದವರಿಗೂ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.
ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಇದುವರೆಗೂ ಸಾಮಾನ್ಯ ವರ್ಗಕ್ಕೆ 35 ವರ್ಷ ವಯೋಮಿತಿ ಇತ್ತು. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 38 ವರ್ಷ ಇದ್ದ ವಯೋಮಿತಿಯನ್ನು ಕೂಡ ಸಡಿಲಿಕೆ ಮಾಡಲಾಗಿದೆ. ಡಿಸೆಂಬರ್ 31 2027ರವರೆಗೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಮಠಗಳಿಗೆ ಭೂಮಿ ನೀಡಲು ನಿರ್ಧಾರ
ಹಿಂದುಳಿದ ವರ್ಗಗಳ 22 ಮಠಗಳಿಗೆ ಭೂಮಿ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ನಗರ ಜಿಲ್ಲೆ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರು ಮಾಡಲಾಗಿದೆ.
ಅಲೆಮಾರಿ, ಅರೆ ಅಲೆಮಾರಿ ಸಮುದಾಯ ಮನೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸಹಾಯಹಸ್ತ ನೀಡಲಿದೆ. ಅದಕ್ಕಾಗಿ 100 ಕೋಟಿ ಮೊತ್ತದಲ್ಲಿ ಮನೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ.



