ಶಿವಮೊಗ್ಗ: ಲೋಕಸಭಾ ಚುನಾವಣೆಯ ನಂತರ ಏಳನೇ ವೇತನ ಆಯೋಗದ ಜಾರಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಅತಿ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ಆಯೋಗ ವರದಿಯನ್ನು ಜುಲೈ ಅಂತ್ಯದೊಳಗೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 7 ನೇ ವೇತನ ಆಯೋಗದ ಬಗ್ಗೆ ರಾಜ್ಯ ಸರ್ಕಾರ ಸಂಘದ ಮನವಿಗೆ ಸ್ಪಂದಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಮುಗಿದ ಬಳಿಕ ನೋಡೋಣ ಎಂದಿದ್ದರು. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಈಗಾಗಲೇ ವರದಿ ಬಂದಿದ್ದು, ಅವರ ಮಾತಿನಂತೆ ನಡೆದುಕೊಳ್ಳುತ್ತಾರೆಂಬ ವಿಶ್ವಾಸ ಇದೆ ಎಂದರು.
7 ನೇ ವೇತನ ಆಯೋಗದ ವರದಿ ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ ಓಪಿಎಸ್ ಬಗ್ಗೆ ಕೂಡ ಮನವಿ ಮಾಡಲಾಗಿದೆ. ಸರ್ಕಾರ ವಿಳಂಬ ಮಾಡಬಾರದೆಂದು ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ. ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಕೂಡಲೇ 7 ನೇ ವೇತನ ಆಯೋಗ ಮತ್ತು ಓಪಿಎಸ್ ಜಾರಿ ಮಾಡಬೇಕು. ಈ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಂಧಿಸಿದ್ದಾರೆ ಎಂದರು.



