ಬೆಂಗಳೂರು: ಕೊರೊನಾ ಕರ್ಫ್ಯೂ ಮಾರ್ಗಸೂಚಿಯನ್ನು ಕರ್ನಾಟಕ ಸರ್ಕಾರ ಪರಿಷ್ಕರಿಸಿದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಇಂದಿನಿಂದಲೇ ಮೇ.02 (ಭಾನುವಾರ) ಅನ್ವಯವಾಗುವಂತೆ ಅವಕಾಶ ನೀಡಿ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಹಾಪ್ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿಗಳಿಗೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಸಂತೆ ಮತ್ತು ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿರಲಿವೆ.
ಮಾರುಕಟ್ಟೆಗಳಲ್ಲಿ ಜನಸಂದಣಿ ತಪ್ಪಿಸಲು ಸರ್ಕಾರ ಈ ಹೊಸ ನಿರ್ಧಾರ ಕೈಗೊಳ್ಳಲಾಗಿದ್ದು, ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಲಾಗಿದ್ದು, ಕೊವಿಡ್ ಮಾರ್ಗಸೂಚಿ ಪಾಲಿಸಿ ವ್ಯಾಪಾರ ಮಾಡಬೇಕು ಎಂದು ನಿಯಮ ರೂಪಿಸಲಾಗಿದೆ.
ದಿನಸಿ ಅಂಗಡಿಗಳಿಗೆ 10ರಿಂದ ಮಧ್ಯಾಹ್ನ 12ರವರೆಗೆ ವಿಸ್ತರಿಸಲಾಗಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆ ವರೆಗೆ ವ್ಯಾಪಾರಿಗಳು ತಳ್ಳುವ ಗಾಡಿಯಲ್ಲಿ ತರಕಾರಿ, ಹಣ್ಣು ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವಂತಿಲ್ಲ ಎಂಬ ಷರತ್ತಿನೊಂದಿಗೆ ಅವಕಾಶ ಒದಗಿಸಲಾಗಿದೆ.



