ಬೆಂಗಳೂರು: ಗ್ಯಾರಂಟಿ ಯೋಜನೆ ಮೂಲಕ ಅಧಿಕಾರ ಹಿಡಿದ ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಜನತೆ ಮತ್ತೊಂದು ಬೆಲೆ ಏರಿಕೆ ಬರೆ ಎಳೆದಿದೆ.ಕರ್ನಾಟಕ ಸರ್ಕಾರ (Karnataka Government) ಡೀಸೆಲ್ (Diesel) ಮೇಲಿನ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದು, ಡೀಸೆಲ್ ಬೆಲೆ ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಾಗಿದೆ.
ಪ್ರತಿನಿತ್ಯ 8 ಸಾವಿರ ಕ್ಯೂಸೆಕ್ ನಂತೆ ಮೂರು ದಿನ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು
ಈಗಾಗಲೇ ಸರ್ಕಾರ ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿದ್ದು, ಇಂದಿನಿಂದಲೇ ಜಾರಿಗೆ ಬಂದಿದೆ. ಇದೀಗ ಜನ ಸಾಮಾನ್ಯರಿಗೆ ಅತಿ ಮುಖ್ಯ ತೈಲದ ಬೆಲೆ ಏರಿಕೆ ಮಾಡಿದೆ. ಇದರಿಂದ ಡಿಸೇಲ್ ಅವಲಂಬಿತ ಸಾರಿಗೆ, ಉತ್ಪಾದನೆ ವಲ ದರ ಏರಿಕೆಗೆ ಕಾರಣವಾಲಿದೆ.ರಾಜ್ಯ ಸರ್ಕಾರ ಡೀಸೆಲ್ ದರವನ್ನು 2 ರೂ. ನಷ್ಟು ಏರಿಕೆ ಮಾಡಿದ ರಾಜ್ಯ ಸರ್ಕಾರ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ದಾವಣಗೆರೆ ವಿಶ್ವವಿದ್ಯಾಲಯ: ಕಾಗಿನೆಲೆ ಶ್ರೀ, ಮಾಜಿ ಸಚಿವ ರವೀಂದ್ರನಾಥ್, ಪ್ರೊ.ನಿರಂಜನಗೆ ಗೌರವ ಡಾಕ್ಟರೇಟ್
ಡಿಸೇಲ್ ಮೇಲಿನ ತೆರಿಗೆ ಈ ಹಿಂದೆ ಶೇ 18.44 ರಷ್ಟು ಇತ್ತು. ಇದೀಗ ಶೇ 21.17ಕ್ಕೆ ಏರಿಕೆಯಾಗಿದೆ. ಸದ್ಯ ಬೆಂಗಳೂರಲ್ಲಿ ಡಿಸೇಲ್ 88.99 ರೂ. ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಡೀಸೆಲ್ ಬೆಲೆ 90 ರೂ. ಆಗಲಿದೆ.
ದರ ಏರಿಕೆಯಿಂದ ರಾಜ್ಯದ ಜನರು ರೋಸಿ ಹೋಗಿದ್ದಾರೆ. ನಿರಂತರ ದರ ಏರಿಕೆಯಿಂದ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ, ವಿರೋಧ ಪಕ್ಷಗಳು ದರ ಏರಿಕೆಯನ್ನು ವಿರೋಧಿಸಿ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿವೆ.



