Connect with us

Dvgsuddi Kannada | online news portal | Kannada news online

ರಾಜ್ಯದ ಪ್ರತಿ ಗ್ರಾಮ‌ ಪಂಚಾಯತಿಗೆ ಒಬ್ಬ ಡೇಟಾ ಎಂಟ್ರಿ ಆಪರೇಟರ್‌ ನೇರ ನೇಮಕಾತಿಗೆ ಸರ್ಕಾರ ಆದೇಶ; ವೇತನ ಎಷ್ಟು ಗೊತ್ತಾ..? ಇಲ್ಲಿದೆ ವಿವರ….!

ಪ್ರಮುಖ ಸುದ್ದಿ

ರಾಜ್ಯದ ಪ್ರತಿ ಗ್ರಾಮ‌ ಪಂಚಾಯತಿಗೆ ಒಬ್ಬ ಡೇಟಾ ಎಂಟ್ರಿ ಆಪರೇಟರ್‌ ನೇರ ನೇಮಕಾತಿಗೆ ಸರ್ಕಾರ ಆದೇಶ; ವೇತನ ಎಷ್ಟು ಗೊತ್ತಾ..? ಇಲ್ಲಿದೆ ವಿವರ….!

ಬೆಂಗಳೂರು: ರಾಜ್ಯದ ಪ್ರತಿ ಗ್ರಾಮ ಪಂಚಾಯತಿಗೂ ಒಬ್ವರಂತೆ ಒಟ್ಟು 5980 ಡೇಟಾ ಎಂಟ್ರಿ ಆಪರೇಟರ್‌ಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ.

ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.ನೇರ ನೇಮಕಾತಿಗೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲೆಯನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ಜಿಲ್ಲಾ ಪಂಚಾಯಿತಿಯ ಸಿಇಒ ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಹುದ್ದೆಗೆ ಆಯ್ಕೆಯಾದ ನೌಕರರಿಗೆ ಕನಿಷ್ಠ 16,738 ರೂ. ವೇತನ ನಿಗದಿಪಡಿಸಲಾಗಿದೆ. ಬಾಪೂಜಿ ಸೇವಾ ಕೇಂದ್ರದಲ್ಲಿ ಸಂಗ್ರಹವಾಗುವ ಮೊತ್ತದಿಂದ ವೇತನ ಪಾವತಿಸಬೇಕಿದೆ.

ಡಾಟಾ ಎಂಟ್ರಿ ಆಪರೇಟರ್ ಗಳ ನೇರ ನೇಮಕಾತಿಗೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲೆಯನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ಉಲ್ಲೇಖ (1) ರಲ್ಲಿ ನಿರ್ದೇಶಿಸಿರುವಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಿಕೊಳ್ಳತಕ್ಕದ್ದು ಹಾಗೂ ಸದರಿ ಹುದ್ದೆಗೆ ಆಯ್ಕೆಯಾದ ನೌಕರರಿಗೆ ಬಾಪೂಜಿ ಸೇವಾ ಕೇಂದ್ರದಲ್ಲಿ ಸಂಗ್ರಹವಾಗುವ ಮೊತ್ತದಿಂದ ವೇತನವನ್ನು ಪಾವತಿಸಲು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರು ಸೂಚನೆ ನೀಡಿದ್ದಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನ, ಮತ್ತು ಇತರೆ ಸೇವಾ ಷರತ್ತುಗಳು ನಿಯಮಗಳು) 2020ರಂತೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇಮಕಾತಿ ವಿಧಾನ, ವಿದ್ಯಾರ್ಹತೆ, ಆಯ್ಕೆ ಸಮಿತಿ ನಿಗದಿಪಡಿಸಿ ಆದೇಶಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top