ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಆನ್ ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ 25-11-2025 ಕೊನೆಯ ದಿನವಾಗಿದೆ.
ಹುದ್ದೆ ವಿವರ
ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆ-ಯೋಜನೆಯ ಮೇಲ್ವಿಚಾರಣೆ, ಪ್ರಾಜೆಕ್ಟ್ ಕಾರ್ಯಗತಗೊಳಿಸುವಿಕೆ, ತಾಂತ್ರಿಕ ಪರಿಶೀಲನೆ ಮತ್ತು ಸಾರ್ವಜನಿಕ ನೀರು ಸರಬರಾಜು ವ್ಯವಸ್ಥೆಯ ತಾಂತ್ರಿಕ ಕಾರ್ಯಗಳಲ್ಲಿ ಮುಖ್ಯ ಜವಾಬ್ದಾರಿ.
ಜ್ಯೂನಿಯರ್ ಇಂಜಿನಿಯರ್-ಕ್ಷೇತ್ರ ಮಟ್ಟದ ಪರಿಶೀಲನೆ, ಕಾಮಗಾರಿಗಳ ಗುಣಮಟ್ಟ ಪರೀಕ್ಷೆ, ತಾಂತ್ರಿಕ ವರದಿ, ಕಚೇರಿ ನಿರ್ವಹಣೆ, ದಾಖಲೆ ಸಂರಕ್ಷಣೆ, ಗ್ರಾಹಕ ಸೇವೆ, ಆಡಳಿತ ಕಾರ್ಯ.
ವಿದ್ಯಾರ್ಹತೆ: ಎಂಜಿನಿಯರಿಂಗ್ ಡಿಗ್ರಿ, ಡಿಪ್ಲೋಮಾ, ಪದವಿ ಅಥವಾ ಪಿಯುಸಿ. ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಸಂಬಂಧಿಸಿದ ವಿಭಾಗದಲ್ಲಿ ಮಾನ್ಯತೆ ಪಡೆದ ವಿವಿಯ ಎಂಜಿನಿಯರಿಂಗ್ ಪದವಿ. ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ 3 ವರ್ಷದ ಡಿಪ್ಲೋಮಾ ಅಗತ್ಯ.
ಅಸಿಸ್ಟೆಂಟ್ ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದ ವಿವಿಯ ಪದವಿ ಮತ್ತು ಕಂಪ್ಯೂಟರ್ ಬೇಸಿಕ್ಸ್ ಕೋರ್ಸ್ ಅಗತ್ಯ. ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ, ಕಂಪ್ಯೂಟರ್ ಜ್ಞಾನ ಅಗತ್ಯ.
ದಾವಣಗೆರೆ: ವಸತಿ ಯೋಜನೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕ
- ಅರ್ಜಿ ಸಲ್ಲಿಕೆಗೆ ಕೊನೆ ದಿನ 25-11-2025
- ಶುಲ್ಕ ಪಾವತಿಸಲು ಕೊನೆ ದಿನ 26-11-2025
- ಅರ್ಜಿ ಸಲ್ಲಿಸಲು: karnatakacareers.org/organization/kea/ ಭೇಟಿ ನೀಡಿ
ನೇಮಕಾತಿ ಸ್ಥಳ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವಿವಿಧ ಘಟಕಗಳು, ಶುದ್ದೀಕರಣ ಘಟಕಗಳು, ನಗರಮಟ್ಟದ ಉಪಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸಲು ನೇಮಕಾತಿ ಮಾಡಲಾಗುವುದು. ಅಲ್ಲದೇ ಕೆಲಸದ ಆದ್ಯತೆ ಮೇರೆಗೆ ಸ್ಥಳ ಬದಲಾವಣೆ ಮಾಡಲಾಗುವುದು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವರ್ಷವಾಗಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ಅಭ್ಯರ್ಥಿಗಳಿಗೆ 38 ವರ್ಷವಾಗಿರಬೇಕು. 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗದವರಿಗೆ 41 ವರ್ಷಗಳ ಗರಿಷ್ಠ ಮಿತಿ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷಗಳ ವಯೋಮಿತಿ.
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರೆ ಪ್ರವರ್ಗಗಳು 750 ರೂ. ಶುಲ್ಕ ಪಾವತಿಸಬೇಕು. ಎಸ್ ಸಿ, ಎಸ್ ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 500 ರೂಪಾಯಿ. ವಿಶೇಷ ಚೇತನ ಅಭ್ಯರ್ಥಿಗಳಿಗೆ 250 ರೂಪಾಯಿ. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದರೆ ಹೆಚ್ಚುವರಿ 100 ರೂ. ಶುಲ್ಕ ಪಾವತಿಸಬೇಕು.
ಅರ್ಜಿ ಸಲ್ಲಿಕೆ ವಿಧಾನ: ಅರ್ಜಿಯನ್ನು ಕೆಇಎ ಅಧಿಕೃತ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬೇಕು.
ಸೂಚನೆ:
1. ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿರುವ ಅರ್ಹತಾ ಪರೀಕ್ಷೆಗಳಲ್ಲಿ ಒಟ್ಟಾರೆ ಕನಿಷ್ಠ ಶೇ. 50 ಅಂಕಗಳಿಸಿದ್ದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
2. ತಾಂತ್ರಿಕ ಹುದ್ದೆಗಳಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಸಾಕ್ಷರತೆಗಾಗಿ ಎಂಜಿನಿಯರಿಂಗ್ / ಡಿಪ್ಲೋಮಾದಲ್ಲಿ ಗಣಕಯಂತ್ರ ವ್ಯಾಸಂಗವನ್ನು ವಿದ್ಯಾರ್ಹತೆಯಲ್ಲಿನ ಒಂದು ವಿಷಯವಾಗಿ ಅಭ್ಯಸಿಸಿರುವುದನ್ನು ಗಣಕಯಂತ್ರ ವ್ಯಾಸಂಗವಾಗಿ ಹಾಗೂ ಇತರೆ ತಾಂತ್ರಿಕೇತರ ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆಯಲ್ಲಿ ಗಣಕಯಂತ್ರ ವ್ಯಾಸಂಗವನ್ನು ಒಂದು ವಿಷಯವನ್ನಾಗಿ ಅಭ್ಯಸಿಸಿದ್ದಲ್ಲಿ ಅದನ್ನು ಗಣಕಯಂತ್ರ ವ್ಯಾಸಂಗವಾಗಿ ಪರಿಗಣಿಸಲಾಗುವುದು.
3. ಮೇಲ್ಕಂಡ ಹುದ್ದೆಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ ಹೊರತುಪಡಿಸಿ, ಇತರೆ ವಿದ್ಯಾರ್ಹತೆಯಲ್ಲಿ ಅರ್ಜಿ ಪರೀಕ್ಷಾ ಪ್ರಾಧಿಕಾರವು ಸಲ್ಲಿಸಿ, ಮುಂದಿನ ಪ್ರಕ್ರಿಯೆಯಲ್ಲಿ ಅನರ್ಹಗೊಂಡಲ್ಲಿ ಜವಾಬ್ದಾರಿಯಾಗಿರುವುದಿಲ್ಲ. ಕರ್ನಾಟಕ



