ಬೆಂಗಳೂರು: ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ಕಂದಾಯ ಇಲಾಖೆಯಲ್ಲಿ (Department of Revenue) ಖಾಲಿ ಇರುವ ಗ್ರಾಮ ಲೆಕ್ಕಿಗ (VA) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ವಿವರ:
- ಒಟ್ಟು ಹುದ್ದೆಗಳು 500
- ವೆಬ್ ಸೈಟ್ :https://kandaya.karnataka.gov.in/
- ಗ್ರಾಮ ಲೆಕ್ಕಿಗ, ಪ್ರಥಮ ದರ್ಜೆ ಸಹಾಯಕ ಹಾಗೂ ದ್ವಿತೀಯ ದರ್ಜೆ ಸಹಾಯಕ
ಮಾಸಿಕ ವೇತನ: ₹34,100 ರಿಂದ ₹ 83,700, ಶೈಕ್ಷಣಿಕ ಅರ್ಹತೆ: ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:ಅಭ್ಯರ್ಥಿಯು ಕನಿಷ್ಠ 18 ರಿಂದ ಗರಿಷ್ಠ 38 ವರ್ಷದೊಳಗಿರಬೇಕು.2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ.ಪರಿಶಿಷ್ಟ ಜಾತಿ(SC) ಹಾಗೂ ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ.
ಅಧಿಸೂಚನೆ ವೀಕ್ಷಿಸಲು https://drive.google.com/file/d/1yvqFWPcszpq6RCNmDtFZvCsTZhYzxCmI/view ಇಲ್ಲಿ ಕ್ಲಿಕ್ ಮಾಡಿ. ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕಿದೆ. ಅರ್ಜಿಸಲ್ಲಿಸಲು ಈ ಲಿಂಕ ಮೇಲೆ ಕ್ಲಿಕ್ ಮಾಡಿ https://kandaya.karnataka.gov.in/. ಅಲ್ಲಿ ಕೇಳಲಾದ ಎಲ್ಲಾ ಮಾಹಿತಿ ಮತ್ತು ದಾಖಲೆಗಳನ್ನು ಸಲ್ಲಿಸಬೇಕಿದೆ.