ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದೆ. ಶೀಘ್ರವೇ 530 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂ.ಟಿ.ಬಿ. ನಾಗರಾಜು ತಿಳಿಸಿದ್ದಾರೆ.
ಪೌರಾಡಳಿತ ಇಲಾಖೆಯಲ್ಲಿ 9972 ಹುದ್ದೆಗಳು ಖಾಲಿ ಇವೆ. ಗ್ರೂಪ್ ಸಿ ವೃಂದದ ಖಾಲಿ ಹುದ್ದೆಗಳನ್ನು ಸರ್ಕಾರದ ಹಂತದಲ್ಲಿ ಹಾಗೂ ಗ್ರೂಪ್ ಬಿ ಮತ್ತು ಸಿ ವೃಂದದಲ್ಲಿ ಖಾಲಿ ಹುದ್ದೆಗಳನ್ನು ಪೌರಾಡಳಿತ ನಿರ್ದೇಶನಾಲಯದ ಹಂತದಲ್ಲಿ ಕಾಲ ಕಾಲಕ್ಕೆ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ. ಮುಂಬಡ್ತಿ ಕೋಟಾ ಅಡಿಯಲ್ಲಿ ಭರ್ತಿ ಮಾಡಲಾಗುವ ಸಿ ವೃಂದದ ಖಾಲಿ ಹುದ್ದೆಗಳನ್ನು ನಿಯಮಾನುಸಾರ ಭರ್ತಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.



