ಸರ್ಕಾರಿ ಇಲಾಖೆಯ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಕರ್ನಾಟಕ ಅರಣ್ಯ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 540 ಫಾರೆಸ್ಟ್ ಗಾರ್ಡ್ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯಲಿದೆ.
ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಡಿಸೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿಯನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕಿದ್ದು, ಅರಣ್ಯ ಇಲಾಖೆ ವೆವ್ ಸೈಟ್ https://aranya.gov.in ಗೆ ಭೇಟಿ ನೀಡಿ ನೇಮಕಾತಿ ವಿಭಾಗದಲ್ಲಿ ಅರ್ಜಿ ಸಲ್ಲಿಸಬೇಕಿದೆ. ಹುದ್ದೆಯ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾದ ಮಾಹಿತಿ ಇಲ್ಲಿದೆ.
ವಿವಿಧ ವೃತ್ತಗಳು ಮತ್ತು ಅಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆಯ ವಿವರ:ಬೆಂಗಳೂರು-49, ಬೆಳಗಾವಿ-12, ಬಳ್ಳಾರಿ-29, ಚಾಮರಾಜನಗರ-83, ಚಿಕ್ಕಮಗಳೂರು-52, ಧಾರವಾಡ-5, ಹಾಸನ-18, ಕಲಬುರ್ಗಿ-58, ಕೆನರಾ-33, ಕೊಡಗು-26, ಮಂಗಳೂರು-62, ಮೈಸೂರು-47, ಶಿವಮೊಗ್ಗ-66 ಹುದ್ದೆಗಳಿವೆ.
ವಿದ್ಯಾರ್ಹತೆ:ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಪಾಸ್ ಮಾಡಿರಬೇಕು. ಅರ್ಜಿ ಸಲ್ಲಿಕೆ ವೇಳೆ ಆನ್‌ಲೈನ್‌ನಲ್ಲಿ ಅಂಕಪಟ್ಟಿಗಳ ಅಪ್‌ಲೋಡ್ ಮಾಡಬೇಕಿರುತ್ತದೆ.
ವಯೋಮಿತತ: ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 30, 2023ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ಸಡಿಲಿಕೆ ಲಭ್ಯ. 2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳಿಗೆ 2 ವರ್ಷ ಮತ್ತು ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ.
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 200 ರೂ. ಮತ್ತು ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಶುಲ್ಕ ಪಾವತಿಸಬೇಕು. ವೇತನ ವಿವರ :ಈ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ 18,600 ರೂ.-32,600 ರೂ. ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ : ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಮೆಡಿಕಲ್ ಫಿಟ್ನೆಸ್ ಟೆಸ್ಟ್ ಮೂಲಕ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಪ್ಟಿಟ್ಯೂಡ್ ಮಾದರಿಯದ್ದಾಗಿದ್ದು, 100 ಅಂಕಗಳನ್ನು ಹೊಂದಿದೆ.
ಅರ್ಜಿ ಸಲ್ಲಿಸುವ ಮುನ್ನ ಗಮನಿಸಬೇಕಾದ ಅಂಶಗಳು; ಅಭ್ಯರ್ಥಿಗಳು ಸ್ವಂತ ಆಧಾರ್ ಕಾರ್ಡ್ ನಂಬರ್ ಮಾತ್ರ ಒದಗಿಸಬೇಕು. ಬೇರೆಯವರ ಆಧಾರ್ ನಂಬರ್ ಒದಗಿಸಿರುವುದು ಕಂಡುಬಂದರೆ ಅಂತಹವರ ಅರ್ಜಿ ತಿರಸ್ಕೃತಗೊಳ್ಳಲಿದೆ. ಅಗತ್ಯವಾದ ಡಾಕ್ಯಮೆಂಟ್ ಅಪ್‌ಲೋಡ್ ಮಾಡಿ ಅರ್ಜಿ ಶುಲ್ಕ ಪಾವತಿಸಿ. ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿ ಅರ್ಜಿ ಸಲ್ಲಿಸಿ.ಭರ್ತಿ ಮಾಡಿದ ಆನ್‌ಲೈನ್ ಅರ್ಜಿಯ ಪ್ರಿಂಟ್ ಔಟ್ ತೆಗೆಯಬೇಕು. ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ ವಿಳಾಸ https://aranya.gov.inಗೆ ಭೇಟಿ ನೀಡಿ.



