Connect with us

Dvgsuddi Kannada | online news portal | Kannada news online

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಶುರು..!!

IMG 20240223 101458

ಪ್ರಮುಖ ಸುದ್ದಿ

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಶುರು..!!

ಬೆಂಗಳೂರು: ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ‌ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿದ್ದು, ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 21,400-42,000 ನಿಗದಿಯಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‍ಸೈಟ್‍ https://kea.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 04 ರಿಂದ ಆರಂಭವಾಗಲಿದ್ದು, ಏಪ್ರೀಲ್ 03 ರವರೆಗೆ ಅವಕಾಶವಿದೆ. ಆನ್‍ಲೈನ್ ಮೂಲಕ ಶುಲ್ಕ ಪಾವತಿ ಮಾಡಲು ಏಪ್ರೀಲ್ 06 ಕೊನೆಯ ದಿನಾಂಕವಾಗಿರುತ್ತದೆ.

ಇಲಾಖೆಯ ಅಧಿಕೃತ ವೆಬ್‍ಸೈಟ್ https://kea.kar.nic.in ನಲ್ಲಿ ತೋರಿಸುವ “Village Administrative Officer Recruitment- 2024” ಲಿಂಕ್ ಅನ್ನು ಆಯ್ಕೆ ಮಾಡಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬಹುದು. ಪೆನ್ ಮತ್ತು ಪೇಪರ್ ಉಪಯೋಗಿಸಿ ಅರ್ಜಿಯನ್ನು ಸಲ್ಲಿಸುವ ವಿಧಾನ ಇರುವುದಿಲ್ಲ.ಹೆಚ್ಚಿನ ಮಾಹಿತಿಗೆ 080-23460460 ಸಂಪರ್ಕಿಸಿ

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು, ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವುದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಅಭ್ಯರ್ಥಿಗಳಿಗೆ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ. ನೇಮಕಾತಿಯು ಸರ್ಕಾರ, ಸಕ್ಷಮ ಪ್ರಾಧಿಕಾರ, ನೇಮಕಾತಿ ಪ್ರಾಧಿಕಾರವು ನಿಗದಿಪಡಿಸಬಹುದಾದ ಅರ್ಹತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಮುಖ ದಿನಾಂಕ: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 04-03-2024ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-04-2024 ಆಗಿರುತ್ತದೆ. ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 06-04-2024.

ವಯೋಮಿತಿ: ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

  • ವೇತನ ಶ್ರೇಣಿ; 21400-42000
  • ಅರ್ಜಿ ಶುಲ್ಕ:
  • ಶುಲ್ಕ ಸಾಮಾನ್ಯ, ಹಿಂದುಳಿದ ವರ್ಗದವರಿಗೆ 750 ರೂ. ಎಸ್ಸಿ ಎಸ್ಟಿ, ವಿಕಲಚೇತನರಿಗೆ 500 ರೂ.
  • ಸ್ಪರ್ಧಾತ್ಮಕ ಪರೀಕ್ಷೆಯನ್ನು ಪರೀಕ್ಷಾ ಪ್ರಾಧಿಕಾರ ನಡೆಸಲಿದ್ದು. ಪರೀಕ್ಷೆಯಲ್ಲಿ ಆಯ್ಕೆಯಾಗಬೇಕು
  • ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಪಡೆದ ಅಂಕ ಆಧರಿಸಿ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ..?

  • ಮೊದಲು kea.kar.nic ವೆಬ್ ಸೈಟ್ ಕ್ಲಿಕ್ ಮಾಡಿ, ಗ್ರಾಮ ಅಡಳಿತಾಧಿಕಾರಿ ಹುದ್ದೆಗೆ ನೇಮಕಾತಿ ಎಂಬುದರ ಮೇಲೆ ಕ್ಲಿಕ್ ಮಾಡಿ
  • ಜಿಲ್ಲಾವಾರು, ಹುದ್ದೆಗಳ ಲಭ್ಯತೆ, ಮೀಸಲಾತಿವಾರು ಸೀಟುಗಳ ಹಂಚಿಕೆಯನ್ನು ಮಾಡಲಾಗಿದ್ದು, ಇದರಲ್ಲಿ ಅರ್ಜಿ ಸಲ್ಲಿಸುವ ಮಾರ್ಗದ ವಿವರ ಇದೆ. ಅಲ್ಲಿಗೆ ತೆರಳಿ ನಿಮ್ಮ ಹೆಸರು, ವಿಳಾಸ, ವಿದ್ಯಾರ್ಹತೆ, ಯಾವ ಜಿಲ್ಲೆ ಎನ್ನುವ ಅಂಶವನ್ನು ನಮೂದಿಸಬೇಕು. ನಂತರ ಶುಲ್ಕವನ್ನು ಭರ್ತಿ ಮಾಡಿದ ಮಾಹಿತಿಯನ್ನೂ ಅದರಲ್ಲಿ ಉಲ್ಲೇಖಿಸಬೇಕು.
  • ಅರ್ಜಿ ಯನ್ನು ಸ್ವೀಕಾರ ಮಾಡಿ ವೆರಿಫೈ ಮಾಡಲಾಗುತ್ತದೆ, ನಂತರ ಪರೀಕ್ಷೆಗೆ ಪ್ರವೇಶ ಪತ್ರ ಬರುತ್ತದೆ. ನಂತರ ನಿಮ್ಮ ಪರೀಕ್ಷೆ ಪ್ರವೇಶ ಪತ್ರವೂ ಬರಲಿದೆ. ಹೆಚ್ಚಿನ ಮಾಹಿತಿಗೆ 080-23460460 ಸಂಪರ್ಕಿಸಿ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top