ಬೆಂಗಳೂರು: ಗ್ರಾಮ ಲೆಕ್ಕಿಗರು ಗ್ರಾಮದ ತಮ್ಮ ಕಚೇರಿಯಲ್ಲೇ ಇದ್ದು, ಎಲ್ಲಾ ಕೆಲಸಗಳನ್ನು ಮಾಡಲು ಮತ್ತು ಪ್ರತಿನಿತ್ಯ ತಾಲೂಕು ಕಚೇರಿಗಳಿಗೆ ಹೋಗುವುದನ್ನು ತಪ್ಪಿಸಲು 10 ಸಾವಿರ ಗ್ರಾಮ ಲೆಕ್ಕಿಗರಿಗೆ ಲ್ಯಾಪ್ ಟಾಪ್ ವಿತರಿಸಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಗ್ರಾಮ ಲೆಕ್ಕಿಗರು ಕಡತಗಳನ್ನು ತಾಲ್ಲೂಕು ಕಚೇರಿಗೆ ತೆಗೆದುಕೊಂಡು ಹೋಗಬೇಕಿತ್ತು. ಇದರಿಂದಾಗಿ ಪಂಚಾಯಿತಿ ಕಚೇರಿಗಳಲ್ಲಿ ಅವರು ಇರುವುದಿಲ್ಲ. ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ ದೂರು ಇತ್ತು. ಈ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಿಗರು ಎಲ್ಲಿ ಇರುತ್ತಾರೋ ಅಲ್ಲಿಂದಲೇ ಕೆಲಸ ಮಾಡಲು ಮತ್ತು ಕಡತಗಳನ್ನು ಆನ್‌ಲೈನ್ ಮೂಲಕ ಕಳುಹಿಸಲು ಅವರಿಗೆ ಇ-ಆಫೀಸ್ ಲಾಗ್‌ಇನ್ ವ್ಯವಸ್ಥೆಯನ್ನೂ ಮಾಡಿಕೊಡಲಾಗುವುದು ಎಂದರು.
ಗ್ರಾಮ ಲೆಕ್ಕಿಗರು ಕಡತಗಳನ್ನು ತಾಲ್ಲೂಕು ಕಚೇರಿಗೆ ಒಯ್ಯುತ್ತಾರೆ. ಇದರಿಂದಾಗಿ ಪಂಚಾಯಿತಿ ಕಚೇರಿಗಳಲ್ಲಿ ಅವರು ಇರುವುದಿಲ್ಲ. ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. ಆದ್ದರಿಂದ ಗ್ರಾಮ ಲೆಕ್ಕಿಗರು ಎಲ್ಲಿ ಇರುತ್ತಾರೋ ಅಲ್ಲಿಂದಲೇ ಕೆಲಸ ಮಾಡಲು ಮತ್ತು ಕಡತಗಳನ್ನು ಆನ್‌ಲೈನ್ ಮೂಲಕ ಕಳುಹಿಸಲು ಅವರಿಗೆ ಇ-ಆಫೀಸ್ ಲಾಗ್‌ಇನ್ ವ್ಯವಸ್ಥೆಯನ್ನೂ… pic.twitter.com/OtZHxTcVgc
— DIPR Karnataka (@KarnatakaVarthe) March 2, 2024



