ದಾವಣಗೆರೆ: ಪ್ರಸಕ್ತ ಸಾಲಿಗೆ ನೇಕಾರ ಸಮ್ಮಾನ ಯೋಜನೆಯಡಿ ಕೈ ಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರು ಹಾಗೂ ನೇಕಾರಿಕೆ ಸಂಬಂಧ ಮಗ್ಗ ಪೂರ್ವ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಉಪನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ರಾಮಾಂಜನೇಯ ಪ್ಲಾಜಾ, ಕಾಲೇಜ್ ರಸ್ತೆ, ನಿಟ್ಟುವಳ್ಳಿ ದಾವಣಗೆರೆ ಇಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 30 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-262362ನ್ನು ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.



