Connect with us

Dvgsuddi Kannada | online news portal | Kannada news online

ರೈತರ ಜಮೀನಿನ ಪಹಣಿಯಲ್ಲಿನ ಲೋಪದೋಷ ಸರಿಪಡಿಸಲು ರಾಜ್ಯಾದ್ಯಂತ ಕಂದಾಯ ಅದಾಲತ್‌

ಪ್ರಮುಖ ಸುದ್ದಿ

ರೈತರ ಜಮೀನಿನ ಪಹಣಿಯಲ್ಲಿನ ಲೋಪದೋಷ ಸರಿಪಡಿಸಲು ರಾಜ್ಯಾದ್ಯಂತ ಕಂದಾಯ ಅದಾಲತ್‌

ಬೆಂಗಳೂರು: ರೈತರ ಜಮೀನಿನ ಪಹಣಿಗಳಲ್ಲಿನ ಲೋಪ ದೋಷಗಳನ್ನು ಸರಿಪಡಿಸಲು ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್‌ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರಂತೆ ಅಧಿಕಾರ ಪ್ರತ್ಯಾಯೋಜನೆಯ ಅವಧಿ ಕಳೆದ ಡಿಸೆಂಬರ್‌ 31ಕ್ಕೆ ಮುಕ್ತಾಯಗೊಂಡಿದೆ. ಅದಾಲತ್‌ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ಅವಧಿ ವಿಸ್ತರಿಸಿ ಈಗಾಗಲೇ ಆದೇಶ ಹೊರಡಿಸಿದ್ದು, ಸದ್ಯದಲ್ಲೇ ಅದಾಲತ್‌ನ ದಿನಾಂಕ ಘೋಷಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top